Kannada Duniya

ಬೇಸಿಗೆಯಲ್ಲಿ ಕೂದಲು ಎಣ್ಣೆಯುಕ್ತವಾಗಿದ್ದರೆ ಈ ಹೇರ್ ಪ್ಯಾಕ್ ಬಳಸಿ

ಬೇಸಿಗೆಯಲ್ಲಿ ಬೆವರುವ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಈ ಸಮಸ್ಯೆಯಿದ್ದಲ್ಲಿ ಚರ್ಮ ಮಾತ್ರವಲ್ಲ ಕೂದಲು ಹಾನಿಗೊಳಗಾಗುತ್ತದೆ. ಹೆಚ್ಚಾಗಿ ಬೇಸಿಗೆಯಲ್ಲಿ ಕೂದಲು ಎಣ್ಣೆಯುಕ್ತವಾಗುತ್ತದೆ. ಇದರಿಂದ ಕೂದಲು ಉದುರುವ ಸಮಸ್ಯೆ ಕಾಡುತ್ತದೆ. ಹಾಗಾಗಿ ಈ ಎಣ್ಣೆಯುಕ್ತ ಕೂದಲಿನ ಸಮಸ್ಯೆಯನ್ನು ನಿವಾರಿಸಲು ಈ ಸಲಹೆ ಪಾಲಿಸಿ.

ಬೇಸಿಗೆಯಲ್ಲಿ ನಿಮ್ಮ ಕೂದಲು ತುಂಬಾ ಎಣ್ಣೆಯುಕ್ತವಾಗಿದ್ದರೆ ಶಾಂಪೂ ಬಳಸಿ. ಮತ್ತು ಮೊಸರಿನ ಹೇರ್ ಪ್ಯಾಕ್ ಹಚ್ಚಿ. ಇದನ್ನು ವಾರದಲ್ಲಿ 2 ಬಾರಿ ಬಳಸಿ. ಅದಕ್ಕಾಗಿ ಮೊಸರು 1 ಕಪ್, 1 ಮಚ ನಿಂಬೆ ರಸ, 1 ಚಮಚ ಅಡುಗೆ ಸೋಡಾ, 1 ಮೊಟ್ಟೆಯ ಬಿಳಿಭಾಗವನ್ನು ತೆಗದುಕೊಂಡು ಚೆನ್ನಾಗಿ ಮಿಕ್ಸ್ ಮಾಡಿ ಹೇರ್ ಪ್ಯಾಕ್ ತಯಾರಿಸಿ ಕೂದಲಿಗೆ ಹಚ್ಚಿ 1 ಗಂಟೆ ಬಿಟ್ಟು ವಾಶ್ ಮಾಡಿ.

ಹಾಗೇ ಬೇಸಿಗೆಯಲ್ಲಿ ಎಣ್ಣೆಯುಕ್ತ ಕೂದಲಿನ ಸಮಸ್ಯೆಯನ್ನು ನಿವಾರಿಸಿ ಕೂದಲು ಆರೋಗ್ಯವಾಗಿರಲು ನಿಂಬೆ ಮತ್ತು ಕಿತ್ತಳೆ ಸಿಪ್ಪೆಯನ್ನು ಬಳಸಿ. ಇವುಗಳ ಸಿಪ್ಪೆಯನ್ನು ತೆಗೆದುಕೊಂಡು ಬಿಸಿಲಿನಲ್ಲಿ ಒಣಗಿಸಿ ಪುಡಿ ಮಾಡಿ ಅದಕ್ಕೆ ಸ್ವಲ್ಪ ನೀರು ಸೇರಿಸಿ ಪೇಸ್ಟ್ ತಯಾರಿಸಿ ಕೂದಲಿಗೆ ಹಚ್ಚಿ 20 ನಿಮಿಷ ಬಿಟ್ಟು ಕೂದಲನ್ನು ತೊಳೆಯಿರಿ.

 


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...