Kannada Duniya

ವಿಟಮಿನ್ ಸಿ ಕೊರತೆ ಸೌಂದರ್ಯದ ಮೇಲೆ ಪರಿಣಾಮ ಬೀರುತ್ತದೆಯೇ?

ವಿಟಮಿನ್ ಸಿ ದೇಹಕ್ಕೆ ಅಗತ್ಯವಾಗಿ ಬೇಕು. ಇದು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಿಂದ ಹಲವಾರು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು. ಆದರೆ ವಿಟಮಿನ್ ಸಿ ಕೊರತೆಯಿಂದ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಾಡುತ್ತದೆಯೇ? ಎಂಬುದಕ್ಕೆ ಇಲ್ಲಿದೆ ಉತ್ತರ.

ವಿಟಮಿನ್ ಸಿ ಚರ್ಮಕ್ಕೆ ಬಹಳ ಒಳ್ಳೆಯದು. ವಿಟಮಿನ್ ಸಿ ಒಂದು ಪ್ರಮುಖ ಉತ್ಕರ್ಷಣ ನಿರೋಧಕವಾಗಿದೆ. ಇದು ಫ್ರಿ ರಾಡಿಕಲ್ಸ್ ವಿರುದ್ಧ ಹೋರಾಡಿ ಚರ್ಮವನ್ನು ರಕ್ಷಿಸುತ್ತದೆ. ಇದರಿಂದ ಚರ್ಮ ಬೇಗ ಸುಕ್ಕುಗಟ್ಟುವುದನ್ನು ತಡೆಯುತ್ತದೆ. ಇದರಿಂದ ನೀವು ದೀರ್ಘಕಾಲದವರೆಗೆ ಯಂಗ್ ಆಗಿ ಕಾಣುತ್ತೀರಿ. ಮತ್ತು ಇದರಿಂದ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಾಡುವುದಿಲ್ಲ.

ಹಾಗಾಗಿ ಚರ್ಮದ ಆರೋಗ್ಯಕ್ಕಾಗಿ ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿ, ಬ್ರೊಕೊಲಿ, ಸ್ಟ್ರಾಬೆರಿ, ನಿಂಬೆ, ಪಪ್ಪಾಯ, ಅನಾನಸ್ ಮುಂತಾದ ಹಣ್ಣುಗಳನ್ನು ಸೇವಿಸಿ. ಇವು ನಿಮ್ಮ ಚರ್ಮದ ಹೊಳಪನ್ನು ಹೆಚ್ಚಿಸುತ್ತವೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...