Kannada Duniya

ಆತ್ಮವಿಶ್ವಾಸ ಹೆಚ್ಚಾಗಲು ಈ ಯೋಗಗಳನ್ನು ಅಭ್ಯಾಸ ಮಾಡಿ….!

ನಮ್ಮ ಜೀವನದಲ್ಲಿ  ಆತ್ಮವಿಶ್ವಾಸ ಹೆಚ್ಚು ಪಾತ್ರವನ್ನು ವಹಿಸುತ್ತದೆ. ಯಾವುದೇ ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸಲು ಇದು ಸಹಕಾರಿಯಾಗಿದೆ. ಹಾಗಾಗಿ ನಾವು ಆತ್ಮವಿಶ್ವಾಸವನ್ನು ಹೊಂದಿರುವುದು ಅವಶ್ಯಕ. ಹಾಗಾಗಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲು ಈ ಯೋಗಗಳನ್ನು ಅಭ್ಯಾಸ ಮಾಡಿ.

ಉಸ್ಟ್ರಾಸಾನ (ಒಂಟೆ ಭಂಗಿ): ನೀವು ನೆಲದ ಮೇಲೆ ಮಂಡಿಯೂರಿ ಬಳಿಕ ನಿಮ್ಮ ಬೆನ್ನನ್ನು ಹಿಂದಕ್ಕೆ ಭಾಗಿಸಿ ನಿಮ್ಮ ಕೈಗಳಿಂದ ನಿಮ್ಮ ಕಾಲುಗಳನ್ನು ಹಿಡಿದುಕೊಳ್ಳಿ. 30 ಸೆಕೆಂಡುಗಳ ಕಾಲ ಹೀಗೆ ಮಾಡಿ.

ಭುಜಂಗಾಸನ(ಕೊಬ್ರಾ ಪೋಸ್) : ನಿಮ್ಮ ಹೊಟ್ಟೆಯ ಮೇಲೆ ಮಲಗಿ ನಿಮ್ಮ ಅಂಗೈಯನ್ನು ಭುಜದ ನೇರಕ್ಕೆ ಕೆಳಗೆ ಇರಿಸಿ ಕೈಗಳ ಮೇಲೆ ಒತ್ತಡ ಹೇರಿ ದೇಹವನ್ನು ಮೇಲಕ್ಕೆತ್ತಿ. ತಲೆಯನ್ನು ಹಿಂದಕ್ಕೆ ಭಾಗಿಸಿ. ಈ ಸ್ಥಾನದಲ್ಲಿ ಕೆಲವು ಸೆಕೆಂಡುಗಳ ಕಾಲ ಇಡಿ.

Yoga: ಪ್ರತಿದಿನ ಈ ಆಸನ ಮಾಡುವುದರಿಂದ ಕೂದಲು ಕಪ್ಪಾಗುತ್ತದೆಯಂತೆ

ಸೇತುಬಂಧಾಸನ(ಸೇತುವೆ ಭಂಗಿ) : ನೀವು ಬೆನ್ನಿನ ಮೇಲೆ ಮಲಗಿ ನಿಮ್ಮ ಪಾದಗಳನ್ನು ನೆಲದ ಮೇಲೆ ಚಪ್ಪಟೆ ಮಾಡಿ ನಿಮ್ಮ ಕುತ್ತಿಗೆ ಮತ್ತು ನಿಮ್ಮ ತಲೆ ಚಾಪೆಯ ಮೇಲೆ ಚಪ್ಪಟೆಯಾಗಿರುವಂತೆ ನಿಮ್ಮ ದೇಹವನ್ನು ಮೇಲಕ್ಕೆತ್ತಿ. ನಿಮ್ಮ ಕೈಗಳನ್ನು ಬೆನ್ನಿನ ಕೆಳಗೆ ಇಡಬಹುದು.

 

 


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...