Kannada Duniya

ಈ ಒಣ ಹಣ್ಣುಗಳನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಆರೋಗ್ಯಕ್ಕೆ ಹಾನಿಕಾರಕಂತೆ!

ಒಣ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿದೆ. ಇದರಲ್ಲಿ ಹಲವು ಪೋಷಕಾಂಶಗಳಿರುತ್ತದೆ. ಆದರೆ ಕೆಲವು ಒಣಹಣ್ಣುಗಳನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದಂತೆ. ಇದರಿಂದ ನಿಮ್ಮ ಆರೋಗ್ಯಕ್ಕೆ ಹಾನಿಯಾಗುತ್ತದೆಯಂತೆ.

ಒಣದ್ರಾಕ್ಷಿ : ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಕಬ್ಬಿಣಾಂಶವಿದ್ದು, ಇದು ರಕ್ತ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಆದರೆ ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುತ್ತದೆಯಂತೆ.

ಅಂಜೂರ : ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಫೈಬರ್ ಅಂಶ ಕಂಡುಬರುತ್ತದೆ. ಇದನ್ನು ಖಾಲಿ ಹೊಟ್ಟೆಯಲ್ಲಿ ತಿಂದರೆ ಜೀರ್ಣಕ್ರಿಯೆಯಲ್ಲಿ ಸಮಸ್ಯೆಯಾಗುತ್ತದೆಯಂತೆ. ಇದರಿಂದ ಹೊಟ್ಟೆಯ ಸೆಳೆತ, ನೋವು ಉಂಟಾಗುತ್ತದೆಯಂತೆ.

ವಾಲ್ನಟ್ಸ್ : ಇದರಲ್ಲಿ ಒಮೆಗಾ 3 ಕೊಬ್ಬಿನಾಮ್ಲ ಸಮೃದ್ಧವಾಗಿದೆ. ಇದನ್ನು ಖಾಲಿ ಹೊಟ್ಟೆಯಲ್ಲಿ ತಿಂದರೆ ಜೀರ್ಣಕ್ರಿಯೆಲ್ಲಿ ಸಮಸ್ಯೆಯಾಗುತ್ತದೆಯಂತೆ.

ಖರ್ಜೂರ : ಇದರಲ್ಲಿ ನೈಸರ್ಗಿಕ ಸಕ್ಕರೆಯಂಶ ಹೆಚ್ಚಾಗಿರುತ್ತದೆ. ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುತ್ತದೆಯಂತೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...