
ಜೇನುತುಪ್ಪ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಆಯುರ್ವೇದದ ಚಿಕಿತ್ಸೆಗಳಲ್ಲಿ ಬಳಸುತ್ತಾರೆ. ಆದರೆ ಜೇನುತುಪ್ಪವನ್ನು ಬಿಸಿ ಮಾಡಿ ಸೇವಿಸಬಹುದೇ? ಎಂಬ ಗೊಂದಲ ಹಲವರಿಗಿದೆ. ಹಾಗಾದ್ರೆ ಜೇನುತುಪ್ಪವನ್ನು ಬಿಸಿ ಮಾಡಿ ಸೇವಿಸಿದರೆ ಏನಾಗುತ್ತದೆ ಎಂಬುದನ್ನು ತಿಳಿಯಿರಿ.
ಕೆಲವರು ಜೇನುತುಪ್ಪವನ್ನು ಬಿಸಿ ಮಾಡಿ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಭಾವಿಸುತ್ತಾರೆ. ಯಾಕೆಂದರೆ ಇದರಲ್ಲಿ ಬ್ಯಾಕ್ಟೀರಿಯಾಗಳಿದ್ದು ಅದು ನಾಶವಾಗುತ್ತದೆ ಎಂದು ತಿಳಿದಿರುತ್ತಾರೆ. ಆದರೆ ತಜ್ಞರು ತಿಳಿಸಿದ ಪ್ರಕಾರ ಜೇನುತುಪ್ಪವನ್ನು ಬಿಸಿ ಮಾಡಿ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ.
ತ್ವಚೆಯ ಕಾಂತಿಯನ್ನು ಹೆಚ್ಚಿಸಲು ದಾಸವಾಳ ಹೂವಿನಿಂದ ಈ ಫೇಸ್ ಪ್ಯಾಕ್ ತಯಾರಿಸಿ ಹಚ್ಚಿ….!
ಯಾಕೆಂದರೆ ಜೇನುತುಪ್ಪವನ್ನು ಬಿಸಿ ಮಾಡಿದಾಗ ಅದರಲ್ಲಿರುವ ಪೋಷಕಾಂಶಗಳು ನಾಶವಾಗುತ್ತದೆ. ಮತ್ತು ಅದು ವಿಷವಾಗಿ ಪರಿಣಮಿಸುತ್ತದೆ. ಇದರಿಂದ ಅನೇಕ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಾಡುತ್ತದೆಯಂತೆ. ಹಾಗಾಗಿ ಕಚ್ಚಾ ಜೇನುತುಪ್ಪವನ್ನು ಸೇವಿಸಿ.