
ಕೆಲಸದ ಹೊರೆ, ಆರೋಗ್ಯದ ಭಯ ಮುಂತಾದ ಸಮಸ್ಯೆಗಳಿಂದ ಜನರಲ್ಲಿ ಒತ್ತಡ ಹೆಚ್ಚಾಗುತ್ತಿದೆ. ಇದು ಜನರ ಜೀವನವನ್ನು ನರಕವಾಗಿಸುತ್ತದೆ. ಹಾಗಾಗಿ ಈ ಒತ್ತಡವನ್ನು ನಿವಾರಿಸುವಂತಹ ಶಕ್ತಿ ನಮಲ್ಲಿ ಉತ್ಪತ್ತಿಯಾಗಲು ವಿಟಮಿನ್ ಭರಿತ ಈ ಆಹಾರವನ್ನು ಸೇವಿಸಿ.
ಕಿತ್ತಳೆ : ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಒತ್ತಡದ ಹಾರ್ಮೋನುಗಳನ್ನು ಕಡಿಮೆ ಮಾಡಲು ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಾಯಕವಾಗಿದೆ. ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ಸಹಕಾರಿಯಾಗಿದೆ.
ಪಾಲಕ್ ಸೊಪ್ಪು : ಇದರಲ್ಲಿ ಕ್ಯಾಲ್ಸಿಯಂ, ಬಿ ಜೀವಸತ್ವಗಳು, ಕಬ್ಬಿಣ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದೆ. ಇದು ಆತಂಕ ಮತ್ತು ಒತ್ತಡವನ್ನು ನಿವಾರಿಸುತ್ತದೆ. ಹಾಗೇ ಇದು ಕಡಿಮೆ ಕಾರ್ಬೋಹೈಡ್ರೇಟ್ ಗಳನ್ನು ಹೊಂದಿದ್ದು, ತೂಕ ನಿಯಂತ್ರಣದಲ್ಲಿರುತ್ತದೆ ಮತ್ತು ಇದು ಅಧಿಕ ರಕ್ತದೊತ್ತಡ ರೋಗಿಗಿಳಿಗೆ ಸಹಕಾರಿ.
ಮೊಟ್ಟೆ : ಇದು ಆರೋಗ್ಯಕ್ಕೆ ತುಂಬಾ ಉಪಯೋಗಕಾರಿ. ಇದರಲ್ಲಿ ವಿಟಮಿನ್ ಗಳು, ಖನಿಜಗಳು, ಅಮೈನೋ ಆಮ್ಲಗಳು ಮತ್ತು ಉತ್ಕರ್ಷಣ ನಿರೋಧಕ ಗುಣಗಳು ಸಮೃದ್ಧವಾಗಿದೆ. ಇದು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಮೆದುಳಿನ ಆರೋಗ್ಯಕ್ಕೆ ಸಹಕಾರಿಯಾಗಿದೆ. ಇದು ಒತ್ತಡದಿಂದ ಮುಕ್ತಿ ನೀಡುತ್ತದೆ.
ತೂಕವನ್ನು ಹೆಚ್ಚಿಸುವ ಆ ಸೂಪರ್ ಆಹಾರಗಳು ಯಾವುದು..? ತಿಳಿಯಿರಿ
ಆವಕಾಡೊ : ಇದರಲ್ಲಿ ವಿಟಮಿನ್ ಬಿ ಸಮೃದ್ಧವಾಗಿದೆ. ಇದು ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದರಲ್ಲಿ ಪೊಟ್ಯಾಸಿಯಂ ಸಮೃದ್ಧವಾಗಿದೆ. ಇದು ರಕ್ತದೊತ್ತಡನ್ನು ಕಡಿಮೆ ಮಾಡುತ್ತದೆ ಮತ್ತು ಒತ್ತಡವನ್ನು ನಿವಾರಿಸುತ್ತದೆ.