
ಹಸಿರು ಈರುಳ್ಳಿ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಇದು ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ. ಮಾತ್ರವಲ್ಲ ಇದು ಹೃದಯದ ಆರೋಗ್ಯಕ್ಕೂ ಪ್ರಯೋಜನಕಾರಿ. ಹಾಗಾಗಿ ಇದನ್ನು ದೈನಂದಿನ ಆಹಾರದಲ್ಲಿ ಬಳಸಿ ಈ ಆರೋಗ್ಯ ಪ್ರಯೋಜನವನ್ನು ಪಡೆಯಿರಿ.
ಹಸಿರು ಈರುಳ್ಳಿಯಲ್ಲಿರುವ ಅಂಶ ಫ್ರೀ ರಾಡಿಕಲ್ಸ್ ಗಳ ವಿರುದ್ಧ ಹೋರಾಡುತ್ತದೆ. ಇದು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.
ಇದರಲ್ಲಿ ವಿಟಮಿನ್ ಸಿ, ಫೋಲಿಕ್ ಆಮ್ಲ, ಫೈಬರ್ ಅಂಶವಿದ್ದು, ಇದು ಅಪಧಮನಿಗಳನ್ನು ಆರೋಗ್ಯವಾಗಿರಿಸುತ್ತದೆ.
ಇದು ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ಹೃದಯಾಘಾತದಿಂದ ಕಾಪಾಡುತ್ತದೆ.
ಬೀನ್ಸ್ ಸೇವಿಸುವುದರಿಂದ ಚರ್ಮಕ್ಕೆ ಏನೆಲ್ಲಾ ಪ್ರಯೋಜನವಿದೆ ಎಂಬುದನ್ನು ತಿಳಿಯಿರಿ….!
ಇದರಲ್ಲಿ ಸಲ್ಫರ್ ಅಂಶವಿದ್ದು, ಇದು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಇದು ಹೃದಯವನ್ನು ಆರೋಗ್ಯವಾಗಿರಿಸುತ್ತದೆ.
ಹಸಿರು ಈರುಳ್ಳಿಯಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತದ ಗುಣಲಕ್ಷಣಗಳಿದ್ದು, ಇದು ಉರಿಯೂತವನ್ನು ಕಡಿಮೆ ಮಾಡುತ್ತದೆ.