
ಕಡಲೆಯಲ್ಲಿ ಕಾರ್ಬೋಹೈಡ್ರೇಟುಗಳು, ಪ್ರೋಟೀನ್, ಕ್ಯಾಲ್ಸಿಯಂ, ಕಬ್ಬಿಣಾಂಶ ಮತ್ತು ವಿಟಮಿನ್ ಸಮೃದ್ಧವಾಗಿದೆ. ಅಲ್ಲದೇ ಹುರಿದ ಕಡಲೆಯಲ್ಲಿ ಫೈಬರ್ ಸಹ ಸಾಕಷ್ಟು ಇರುತ್ತದೆ.
ಇದನ್ನು ಬೆಳಿಗ್ಗೆ ತಿಂದರೆ ತುಂಬಾ ಒಳ್ಳೆಯದು. ಇದು ರುಚಿಕರ ಮಾತ್ರವಲ್ಲ ಆರೋಗ್ಯಕ್ಕೂ ಉತ್ತಮ. ಇದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.
-ಕಡಲೆ ರಕ್ತದಲ್ಲಿನ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡುತ್ತದೆ. ಹಾಗಾಗಿ ಇದು ಮಧುಮೇಹಿಗಳಿಗೆ ತುಂಬಾ ಒಳ್ಳೆಯದು.
-ಇದು ಮಹಿಳೆಯರ ಈಸ್ಟ್ರೋಜನ್ ಹಾರ್ಮೋನ್ ಅನ್ನು ನಿಯಂತ್ರಿಸುತ್ತದೆ. ಇದು ಮಹಿಳೆಯರ ಹಾರ್ಮೋನ್ ಗಳನ್ನು ಸಮತೋಲಗೊಳಿಸುತ್ತದೆ. ಸ್ತನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.
-ಇದರಲ್ಲಿ ಪ್ರೋಟೀನ್, ಕ್ಯಾಲ್ಸಿಯಂ, ಕಬ್ಬಿಣಾಂಶ ಮತ್ತು ವಿಟಮಿನ್ ಹಾಗೂ ಫೈಬರ್ ಸಮೃದ್ಧವಾಗಿರುತ್ತದೆ. ಹಾಗಾಗಿ ಇದನ್ನು ಸೇವಿಸಿದರೆ ದೇಹದ ಶಕ್ತಿ ಹೆಚ್ಚಾಗುತ್ತದೆ.
-ಇದು ಗರ್ಭಿಣಿಯರಿಗೆ ತುಂಬಾ ಒಳ್ಳೆಯದು. ಇದು ಗರ್ಭಾವಸ್ಥೆಯಲ್ಲಿ ಕಾಡುವ ವಾಂತಿ ಸಮಸ್ಯೆಯನ್ನು ನಿವಾರಿಸುತ್ತದೆ. ಹಾಗಾಗಿ ಗರ್ಭಿಣಿಯರು ಹುರಿದ ಕಡಲೆಯನ್ನು ಸೇವಿಸಬಹುದು.
Chanyaka niti : ಅಭ್ಯಾಸವಿದ್ದವರು ಯಾವಾಗಲೂ ಬಡವರಾಗಿ ಇರುತ್ತಾರೆ, ಯಾಕೆ ಗೊತ್ತಾ…?
-ಹೆಚ್ಚಿನ ಮಹಿಳೆಯರು ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹಾಗಾಗಿ ಆಂತವರು ಕಡಲೆಯನ್ನು ಸೇವಿಸಿ. ಇದರಲ್ಲಿ ಕಬ್ಬಿಣಾಂಶ ಹೆಚ್ಚಾಗಿರುವುದರಿಂದ ಇದು ರಕ್ತದ ಪ್ರಮಾಣವನ್ನು ಹೆಚ್ಚಿಸುತ್ತದೆ.
-ಕಡಲೆಯಲ್ಲಿ ಕ್ಯಾಲ್ಸಿಯಂ ಅಧಿಕವಾಗಿದ್ದು, ಇದನ್ನು ಪ್ರತಿದಿನ ತಿಂದರೆ ಮೂಳೆಗಳು ಬಲಗೊಳ್ಳುತ್ತದೆ.