Kannada Duniya

ಅತಿಯಾಗಿ ದಾಲ್ಚಿನ್ನಿಯನ್ನು ಸೇವಿಸಿದರೆ ಈ ಸಮಸ್ಯೆ ಕಾಡುವುದು, ಎಚ್ಚರ…!

ದಾಲ್ಚಿನ್ನಿ ಆರೋಗ್ಯಕ್ಕೆ ಉತ್ತಮ ನಿಜ. ಇದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು. ಇದು ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಹಾಗಾಗಿ ಇದನ್ನು ಕೊರೊನಾ ಕಷಾಯಗಳನ್ನು ಮಾಡಲು ಬಳಸುತ್ತಾರೆ. ಆದರೆ ಇದನ್ನು ಅತಿಯಾಗಿ ಬಳಸಿದರೆ ಈ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತೀರಿ.

ದಾಲ್ಚಿನ್ನಿಯಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದೆ. ಇದು ಮುನುಷ್ಯನ ಆರೋಗ್ಯಕ್ಕೆ ಪ್ರಯೋಜನಕಾರಿ. ಹಾಗೇ ಇದು ಕೂದಲು ಮತ್ತು ಚರ್ಮಕ್ಕೂ ಒಳ್ಳೆಯದು. ಅಲ್ಲದೇ ಇದರಲ್ಲಿರುವ ಉರಿಯೂತದ ಗುಣಗಳು ಅಧಿಕ ರಕ್ತದೊತ್ತಡ, ಹೃದ್ರೋಗ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.

ದಾಲ್ಚಿನ್ನಿ ಬಳಸಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಿ

ಆದರೆ ಇದನ್ನು ಅತಿಯಾಗಿ ಸೇವಿಸಿದರೆ ಆರೋಗ್ಯಕ್ಕೆ ಹಾನಿಕಾರಕ. ಇದು ಸಂಶೋಧನೆಯೊಂದರಿಂದ ತಿಳಿದುಬಂದಿದೆ. ದಾಲ್ಚನ್ನಿಯನ್ನು ಅತಿಯಾಗಿ ಸೇವಿಸಿದರೆ ಕ್ಯಾನ್ಸರ್ ಮತ್ತು ಹೃದ್ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ. ಇದು ಬಾಯಿ ಹುಣ್ಣಿನ ಸಮಸ್ಯೆಗೆ ಕಾರಣವಾಗುತ್ತದೆ. ರಕ್ತದಲ್ಲಿ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಉಸಿರಾಟದ ಸಮಸ್ಯೆಗೆ ಕಾರಣವಾಗುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದುಬಂದಿದೆ.

 


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...