Kannada Duniya

ಇಡ್ಲಿ ಸಾಂಬಾರ್ ಪ್ರತಿದಿನ ಸೇವಿಸಿದರೆ ಏನಾಗುತ್ತದೆ ಗೊತ್ತಾ?

ಬೆಳಿಗ್ಗಿನ ಉಪಹಾರದಲ್ಲಿ ಹೆಚ್ಚಿನ ಜನರು ಇಡ್ಲಿ ಸಾಂಬಾರ್ ತಿನ್ನಲು ಇಷ್ಟಪಡುತ್ತಾರೆ. ಇದು ಉತ್ತಮ ಪೋಷಕಾಂಶಗಳನ್ನು ಒಳಗೊಂಡಿರುತ್ತದೆ. ಇದು ದೇಹಕ್ಕೆ ಪ್ರಯೋಜನಕಾರಿಯಾಗಿದೆ. ಹಾಗಾಗಿ ಇದನ್ನು ಪ್ರತಿದಿನ ತಿನ್ನುವುದರಿಂದ ಏನಾಗುತ್ತದೆ ಎಂಬುದನ್ನು ತಿಳಿಯಿರಿ.

ಇಡ್ಲಿ ಸಾಂಬಾರ್ ಎರಡೂ ಕಡಿಮೆ ಕ್ಯಾಲೋರಿಯನ್ನು ಹೊಂದಿದೆ. ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದು ಫೈಬರ್ ಅನ್ನು ಸಹ ಹೊಂದಿರುತ್ತದೆ. ಇಡ್ಲಿ ಸಾಂಬಾರ್ ತಿನ್ನುವುದರಿಂದ ಹೊಟ್ಟೆ ದೀರ್ಘಕಾಲ ತುಂಬಿರುವ ಅನುಭವಾಗುತ್ತದೆ. ಇದರಿಂದ ನಿಮಗೆ ಮತ್ತೆ ಮತ್ತೆ ಹಸಿವಾಗುವುದಿಲ್ಲ.

ಇಡ್ಲಿ ಸಾಂಬಾರ್ ಫೈಬರ್ ಅನ್ನು ಹೊಂದಿರುತ್ತದೆ. ಇದು ಜೀರ್ಣ ಕ್ರಿಯೆಗೆ ತುಂಬಾ ಒಳ್ಳೆಯದು. ಇದನ್ನು ದೀರ್ಘಕಾಲದವರೆಗೆ ಸೇವಿಸುವುದರಿಂದ ಮಲಬದ್ಧತೆ, ಹೊಟ್ಟೆ ಸೆಳೆತ, ಹೊಟ್ಟೆನೋವು ಮುಂತಾದ ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ. ಮತ್ತು ಇದರಲ್ಲಿ ಕಾರ್ಬೋಹೈಡ್ರೇಟ್ ಗಳಿದ್ದು, ಇದು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...