Kannada Duniya

ಈ ಕೆಂಪು ವಸ್ತುಗಳನ್ನು ಸೇವಿಸಿ ಹೃದಯ ಆರೋಗ್ಯವಾಗಿರಲು….!

ಫಿಟ್ ಆಗಿರುವುದರ ಜೊತೆಗೆ ಹೃದಯವನ್ನು ಆರೋಗ್ಯವಾಗಿ ಇಟ್ಟುಕೊಳ್ಳುವುದು ಕೂಡ ಬಹಳ ಮುಖ್ಯ. ಹಾಗಾಗಿ ನೀವು ಹೃದಯದ ಬಗ್ಗೆ ಹೆಚ್ಚು ಕಾಳಜಿವಹಿಸಬೇಕು. ಅದಕ್ಕಾಗಿ ನೀವು ಸೇವಿಸುವ ಆಹಾರದ ಬಗ್ಗೆ ಗಮನಕೊಡಬೇಕು. ನಿಮ್ಮ ಹೃದಯ ಆರೋಗ್ಯವಾಗಿರಲು ಈ ಕೆಂಪು ವಸ್ತುಗಳನ್ನು ಖಂಡಿತವಾಗಿ ಸೇವಿಸಿ.

ಸೇಬು : ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಶೇಕಡಾ 40 ರಷ್ಟು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ಇದನ್ನು ನೀವು ಪ್ರತಿದಿನ ಸೇವಿಸಿದರೆ ನಿಮ್ಮ ಹೃದಯ ಬಲಗೊಳ್ಳುತ್ತದೆ.

ದಾಳಿಂಬೆ : ಇದರಲ್ಲಿ ಟ್ಯಾನಿನ್ ಗಳು ಮತ್ತು ಆಂಥೋಸಯಾನಿನ್ ಗಳಂತಹ ಉತ್ಕರ್ಷಣ ನಿರೋಧಕಗಳು ಕಂಡುಬರುತ್ತದೆ. ಇದು ಉರಿಯೂತದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಹಾಗಾಗಿ ಪ್ರತಿದಿನ 1 ಲೋಟ ದಾಳಿಂಬೆ ರಸ ಸೇವಿಸಿ. ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ.

ಸಸ್ಯಹಾರ ಸೇವಿಸುವುದರಿಂದ ಸಂಧಿವಾತ ಸಮಸ್ಯೆ ನಿವಾರಣೆಯಾಗುತ್ತದೆಯೇ….?

ಸ್ಟ್ರಾಬೆರಿ : ಇದರಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದೆ. ಇದು ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಹಾಗೇ ಇದನ್ನು ತಿನ್ನುವುದರಿಂದ ಮಧುಮೇಹ ಸಮಸ್ಯೆಯನ್ನು ತಪ್ಪಿಸಬಹುದು.

ಬೀಟ್ ರೋಟ್ : ಇದರಲ್ಲಿ ವಿಟಮಿನ್ ಬಿ, ಕಬ್ಬಿಣ, ಮ್ಯಾಂಗನೀಸ್ ನಂತಹ ಅನೇಕ ಪೋಷಕಾಂಶಗಳಿವೆ. ಇದು ನಿಮ್ಮ ಹೃದಯವನ್ನು ಬಲಪಡಿಸುತ್ತದೆ. ಇದನ್ನು ಪ್ರತಿದಿನ ಸೇವಿಸುವುದರಿಂದ ನಿಮ್ಮ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...