Kannada Duniya

ಈ ಡೈರಿ ಉತ್ಪನ್ನವನ್ನು ಬಳಸಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಿಕೊಳ್ಳಿ

ಡೈರಿ ಉತ್ಪನ್ನಗಳಲ್ಲಿ ಕೊಬ್ಬಿನಾಂಶ ಹೆಚ್ಚಾಗಿರುತ್ತದೆ ಇವುಗಳನ್ನು ಸೇವಿಸುವುದರಿಂದ ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ. ಆಗ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಕಡಿಮೆಯಾಗುತ್ತದೆ. ಹಾಗಾಗಿ ನೀವು ಈ ಡೈರಿ ಉತ್ಪನ್ನವನ್ನು ಹೀಗೆ ಬಳಸಿ.

ಕೊಲೆಸ್ಟ್ರಾಲ್ ಹೆಚ್ಚಾಗುವುದರಿಂದ ಹೃದಯದ ಸಮಸ್ಯೆಗಳು ಮಾತ್ರವಲ್ಲ, ಬೊಜ್ಜು ಮತ್ತು ತೂಕ ಹೆಚ್ಚಳ , ಮಧುಮೇಹ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ನೀವು ಮಜ್ಜಿಗೆಯನ್ನು ಸೇವಿಸಿ. ಮಜ್ಜಿಗೆ ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ. ಇದು ಮಲಬದ್ಧತೆ, ಅಜೀರ್ಣ ಮತ್ತು ಹೊಟ್ಟೆಯುರಿ ಸಮಸ್ಯೆಯನ್ನು ನಿವಾರಿಸುತ್ತದೆ.

ಹಾಗಾಗಿ ಮಜ್ಜಿಗೆಗೆ ಅಗಸೆಬೀಜ, ಜೀರಿಗೆ , ಮೆಂತ್ಯವನ್ನು ಸೇರಿಸಿ ಚೆನ್ನಾಗಿ ರುಬ್ಬಿ. ಇದನ್ನು ಊಟವಾದ ನಂತರ ಸೇವಿಸಿ. ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದರ ಜೊತೆಗೆ ನಿಮ್ಮ ತೂಕವನ್ನು ನಿಯಂತ್ರಣದಲ್ಲಿರಿಸುತ್ತದೆ. ಇದು ದೇಹಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...