Kannada Duniya

ಈ ಸಮಸ್ಯೆ ಇರುವವರು ನೆಲ್ಲಿಕಾಯಿಯನ್ನು ಸೇವಿಸಬೇಡಿ….!

ನೆಲ್ಲಿಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಹಲವು ಪೋಷಕಾಂಶಗಳಿವೆ. ಇದನ್ನು ಸೇವಿಸುವುದರಿಂದ ದೇಹಕ್ಕೆ ಹಲವು ಪ್ರಯೋಜನಗಳು ದೊರೆಯುತ್ತದೆ. ಆದರೆ ನೆಲ್ಲಿಕಾಯಿಯನ್ನು ಸೇವಿಸುವುದರಿಂದ ಕೆಲವು ಹಾನಿಗಳು ಸಂಭವಿಸುತ್ತದೆ. ಹಾಗಾಗಿ ಇಂತಹ ಸಮಸ್ಯೆ ಇರುವವರು ನೆಲ್ಲಿಕಾಯಿಯನ್ನು ಸೇವಿಸಬೇಡಿ.

ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಇರುವವರು ನೆಲ್ಲಿಕಾಯಿಯನ್ನು ಸೇವಿಸಬೇಡಿ. ಇದು ಅತಿಸಾರ, ಮತ್ತು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಇದೆ. ಇದು ಆಮ್ಲೀಯತೆಯನ್ನು ಹೆಚ್ಚಿಸುತ್ತದೆ. ಹಾಗಾಗಿ ಗ್ಯಾಸ್ಟ್ರಿಕ್ , ಆ್ಯಸಿಡ್ ರಿಫ್ಲೆಕ್ಸ್ ಸಮಸ್ಯೆ ಇರುವವರು ನೆಲ್ಲಿಕಾಯಿಯನ್ನು ಸೇವಿಸಬೇಡಿ.

ಅಲ್ಲದೇ ಕೆಲವು ಜನರು ನೆಲ್ಲಿಕಾಯಿ ಅಲರ್ಜಿಯನ್ನು ಹೊಂದಿರುತ್ತಾರೆ. ಅಂತವರು ಇದನ್ನು ಸೇವಿಸಬೇಡಿ. ಇದರಿಂದ ತುರಿಕೆ ಮತ್ತು ಉಸಿರಾಟದ ಸಮಸ್ಯೆಗಳು ಕಾಡುತ್ತದೆಯಂತೆ.

ಮಕ್ಕಳ ಮುಂದೆ ಪೋಷಕರು ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…!

ನೆಲ್ಲಿಕಾಯಿಯಲ್ಲಿ ಆಕ್ಸಲೇಟ್ ಪ್ರಮಾಣ ಹೆಚ್ಚಾಗಿರುತ್ತದೆ. ಇದು ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆಗೆ ಕಾರಣವಾಗುತ್ತದೆ. ಹಾಗಾಗಿ ಕಿಡ್ನಿ ಸಮಸ್ಯೆ ಇರುವವರು ನೆಲ್ಲಿಕಾಯಿಯನ್ನು ಸೇವಿಸಬೇಡಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...