Kannada Duniya

ಗರ್ಭಾವಸ್ಥೆಯಲ್ಲಿ ಚರ್ಮ ಕಪ್ಪಾಗುವುದನ್ನು ತಡೆಯಲು ಈ ಟಿಪ್ಸ್ ಬಳಸಿ

ಗರ್ಭಾವಸ್ಥೆಯಲ್ಲಿ ಮಹಿಳೆಯರು ಹಾರ್ಮೋನ್ ಬದಲಾವಣೆಯಿಂದ ಹಲವಾರು ಆರೋಗ್ಯ ಸಮಸ್ಯೆಗಳನ್ನು ಅನುಭವಿಸುತ್ತಾರೆ. ಅದರಲ್ಲೂ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚು ಕಾಡುತ್ತವೆ. ಈ ಸಮಯದಲ್ಲಿ ಮಹಿಳೆಯರ ಚರ್ಮ ಕಪ್ಪಾಗುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.

ಹಾಗಾಗಿ ಮಹಿಳೆಯರು ಗರ್ಭಾವಸ್ಥೆಯಲ್ಲಿ ಚರ್ಮ ಕಪ್ಪಾಗುವುದನ್ನು ತಡೆಯಲು ಚರ್ಮಕ್ಕೆ ಎಣ್ಣೆಯಿಂದ ಮಸಾಜ್ ಮಾಡಿ. ನಂತರ ಸ್ನಾನ ಮಾಡಿ. ಇದು ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ ಮತ್ತು ಚರ್ಮವನ್ನು ಆರೋಗ್ಯವಾಗಿಡುತ್ತದೆ.

ಗರ್ಭಿಣಿಯರು ಚರ್ಮಕ್ಕೆ ರಾಸಾಯನಿಕಯುಕ್ತ ಫೇಸ್ ಪ್ಯಾಕ್ ಅನ್ನು ಬಳಸುವ ಬದಲು ಮನೆಯಲ್ಲಿಯೇ ನೈಸರ್ಗಿಕ ಪದಾರ್ಥಗಳನ್ನು ಬಳಸಿ ತಯಾರಿಸಿದ ಫೇಸ್ ಪ್ಯಾಕ್ ಗಳನ್ನು ಆಗಾಗ ಮುಖಕ್ಕೆ ಮತ್ತು ಕುತ್ತಿಗೆಗೆ ಬಳಸುತ್ತೀರಿ. ಇದು ಚರ್ಮ ಕಪ್ಪಾಗುವುದನ್ನು ತಡೆಯುತ್ತದೆ.

ಹಾಗೇ ಸಾಕಷ್ಟು ನೀರನ್ನು ಕುಡಿಯಿರಿ. ಇದು ಚರ್ಮವನ್ನು ಹೈಡ್ರೇಟ್ ಆಗಿಡುತ್ತದೆ. ಇದರಿಂದ ಚರ್ಮ ಮೃದುವಾಗಿ ಹೊಳೆಯುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...