Kannada Duniya

ಚಳಿಗಾಲದಲ್ಲಿ ಈ ಡ್ರೈ ಫ್ರೂಟ್ಸ್ ಅನ್ನು ತಪ್ಪದೇ ಸೇವಿಸಿ

ಚಳಿಗಾಲದಲ್ಲಿ ನಿಮ್ಮ ಆರೋಗ್ಯ ಬಹಳ ಬೇಗನೆ ಹದಗೆಡುತ್ತದೆ. ಹಾಗಾಗಿ ಈ ಸಮಯದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಕೊಡಬೇಕು. ಅದಕ್ಕಾಗಿ ನೀವು ಚಳಿಗಾಲದಲ್ಲಿ ದೇಹಕ್ಕೆ ಪೋಷಕಾಂಶಗಳನ್ನು ಒದಗಿಸುವಂತಹ ಆಹಾರವನ್ನು ಸೇವಿಸಬೇಕು. ಹಾಗಾದ್ರೆ ಚಳಿಗಾಲದಲ್ಲಿ ಈ ಡ್ರೈ ಫ್ರೂಟ್ಸ್ ಅನ್ನು ಸೇವಿಸಿ.

ವಾಲ್ ನಟ್ಸ್ : ಇದರಲ್ಲಿ ಒಮೆಗಾ 3 ಕೊಬ್ಬಿನಾಮ್ಲಗಳು ಸಮೃದ್ಧವಾಗಿದೆ. ಇದು ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಮೆದುಳನ್ನು ಆರೋಗ್ಯವಾಗಿರಿಸುತ್ತದೆ. ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.

ಬಾದಾಮಿ : ಇದರಲ್ಲಿ ವಿಟಮಿನ್ ಇ ಸಮೃದ್ಧವಾಗಿದೆ. ಇದು ಚರ್ಮದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಚರ್ಮವನ್ನು ಮೃದುವಾಗಿಸಿ ಚಳಿಗಾಲದಲ್ಲಿ ಕಾಡುವಂತಹ ಚರ್ಮದ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ.

ಖರ್ಜೂರ : ಇದು ಉಷ್ಣದ ಗುಣಗಳನ್ನು ಹೊಂದಿರುವ ಕಾರಣ ಇದು ದೇಹವನ್ನು ಬೆಚ್ಚಗಿಡುತ್ತದೆ. ಇದು ದೇಹಕ್ಕೆ ಶಕ್ತಿ ನೀಡಿ ಆಯಾಸ, ಸೋಮಾರಿತನವನ್ನು ಹೋಗಲಾಡಿಸುತ್ತದೆ.

ಒಣದ್ರಾಕ್ಷಿ : ಇದು ಚಳಿಗಾಲದಲ್ಲಿ ಕಾಡುವಂತಹ ಜೀರ್ಣಕಾರಿ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ. ಮತ್ತು ಇದು ದೇಹವನ್ನು ಬೆಚ್ಚಗಿಡಲು ಸಹಾಯ ಮಾಡುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...