Kannada Duniya

ಚಳಿಗಾಲದಲ್ಲಿ ತೂಕ ಇಳಿಸಿಕೊಳ್ಳಲು ಈ ಜ್ಯೂಸ್ ಕುಡಿಯಿರಿ…!

ಚಳಿಗಾಲದಲ್ಲಿ ಹೆಚ್ಚಿನ ಜನರು ಹುರಿದ ಆಹಾರವನ್ನು ತಿನ್ನಲು ಇಷ್ಟಪಡುತ್ತಾರೆ. ಇದರಿಂದ ತೂಕ ತ್ವರಿತವಾಗಿ ಹೆಚ್ಚಾಗುತ್ತದೆ. ಅಲ್ಲದೇ ದೇಹದಲ್ಲಿ ಬೊಜ್ಜು ಸಂಗ್ರಹವಾಗುತ್ತದೆ. ಯಕೆಂದರೆ ಚಳಿಗಾಲದಲ್ಲಿ ನಮ್ಮ ಚಯಾಪಚಯ ಕ್ರಿಯೆ ನಿಧಾನವಾಗುತ್ತದೆ. ಹಾಗಾಗಿ ಚಳಿಗಾಲದಲ್ಲಿ ತೂಕವನ್ನು ಇಳಿಸಿಕೊಳ್ಳಲು ಸೌತೆಕಾಯಿ ಮತ್ತು ಕೊತ್ತಂಬರಿ ಜ್ಯೂಸ್ ತಯಾರಿಸಿ ಸೇವಿಸಿ.

ಒಂದು ಸೌತೆಕಾಯಿ ತೆಗೆದುಕೊಂಡು ಅದರ ಸಿಪ್ಪೆ ತೆಗೆದು ಅದಕ್ಕೆ ಅರ್ಧ ಕಪ್ ಕೊತ್ತಂಬರಿ ಸೊಪ್ಪು, 1 ಚಮಚ ಅಲೋವೆರಾ ರಸ, 1 ಚಮಚ ತುರಿದ ಶುಂಠಿಯನ್ನು ಸೇರಿಸಿ ಒಂದು ಲೋಟ ನೀರು ಸೇರಿಸಿ ಮಿಕ್ಸಿಯಲ್ಲಿ ರುಬ್ಬಿ. ನಂತರ ಅದರಿಂದ ರಸ ತೆಗೆದು ಅದಕ್ಕೆ ನಿಂಬೆ ರಸವನ್ನು ಮಿಶ್ರಣ ಮಾಡಿ. ಪ್ರತಿದಿನ ಈ ಜ್ಯೂಸ್ ಕುಡಿಯಿರಿ.

 ಈ ವಸ್ತುಗಳು ರಕ್ತದ ಕೊಳೆಗಳನ್ನು ಸ್ವಚ್ಛಗೊಳಿಸುತ್ತವೆ, ರಕ್ತದ ಕೊಬ್ಬಿನಿಂದ ಯೂರಿಯಾದವರೆಗೆ ಎಲ್ಲವೂ ಹೊರಹೋಗುತ್ತದೆ….!

ಸೌತೆಕಾಯಿ ಮತ್ತು ಕೊತ್ತಂಬರಿಯಲ್ಲಿ ಹಲವು ಪೋಷಕಾಂಶಗಳಿವೆ. ಇವು ನಿಮ್ಮ ಜೀರ್ಣಕ್ರಿಯೆ ಮತ್ತು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಇದರಿಂದ ದೇಹದಲ್ಲಿ ಸಂಗ್ರಹವಾದ ಕೊಬ್ಬು ಕರಗುತ್ತದೆ ಮತ್ತು ತೂಕ ಕಡಿಮೆಯಾಗುತ್ತದೆ. ಇದರಿಂದ ನೀವು ಫಿಟ್ ಆಗಿ ಕಾಣಬಹುದು.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...