Kannada Duniya

Child care:ಚಳಿಗಾಲದಲ್ಲಿ ನಿಮ್ಮ ಮಕ್ಕಳನ್ನು ಅನೇಕ ರೋಗಗಳಿಂದ ರಕ್ಷಿಸುತ್ತವೆ ಈ ಗಿಡಮೂಲಿಕೆಗಳು…!

ಚಳಿಗಾಲದಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಬೇಕಾಗುತ್ತದೆ. ಇಲ್ಲವಾದರೆ ಮಕ್ಕಳು ಹೆಚ್ಚು ಕಾಯಿಲೆ ಬೀಳುತ್ತಾರೆ. ಅವರಿಗೆ ಹೆಚ್ಚಾಗಿ ಶೀತ, ಕಫದ ಸಮಸ್ಯೆ ಕಾಡುತ್ತದೆ. ಹಾಗಾಗಿ ಮಕ್ಕಳನ್ನು ಚಳಿಗಾಲದಲ್ಲಿ ಅನೇಕ ರೋಗಗಳಿಂದ ಕಾಪಾಡಲು ಈ ಗಿಡಮೂಲಿಕೆಗಳನ್ನು ನೀಡಿ.

 

ಶುಂಠಿ : ಇದು ಚಳಿಗಾಲದಲ್ಲಿ ಶೀತ, ಕೆಮ್ಮನ್ನು ಗುಣಪಡಿಸಲು ಬಳಸಲಾಗುತ್ತದೆ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಲ್ ಗುಣಗಳಿದ್ದು, ಇದು ಕಫ ಮತ್ತು ಗಂಟಲು ನೋವನ್ನು ನಿವಾರಿಸುತ್ತದೆ. ಇದರಿಂದ ಕಷಾಯ ತಯಾರಿಸಿ 6 ತಿಂಗಳ ಮೇಲ್ಪಟ್ಟ ಮಕ್ಕಳಿಗೆ ನೀಡಬಹುದು.

ಜೇನುತುಪ್ಪ : 1ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಜೇನುತುಪ್ಪ ನೀಡಬಹುದು. ಇದು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು ಕಂಡುಬರುತ್ತದೆ. ಇದು ಮಕ್ಕಳ ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ.

ತುಳಸಿ : ಇದು ಮಕ್ಕಳ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಇದು ಶೀತ, ಕಫದಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ತುಳಸಿ ರಸ ತೆಗೆದು ಮಕ್ಕಳಿಗೆ ಕುಡಿಸಿ. ಇದರಿಂದ ಮಕ್ಕಳ ಅನೇಕ ಸಮಸ್ಯೆಗಳನ್ನು ನಿವಾರಿಸಬಹುದು.

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದರಿಂದ ಏನಾಗುತ್ತದೆ ಗೊತ್ತಾ?

ಪಿಪ್ಪಲಿ : ಇದು ಮಕ್ಕಳ ಆರೋಗ್ಯಕ್ಕೆ ಒಳ್ಳೆಯದು. ಇದು ಉಸಿರಾಟದ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ. ಇದು ಶ್ವಾಸಕೋಶಗಳನ್ನು ಶುಚಿಗೊಳಿಸುತ್ತದೆ. ಹಾಗಾಗಿ ಚಳಿಗಾಲದಲ್ಲಿ ಕಾಡುವ ವೈರಸ್ ಸಮಸ್ಯೆ, ಉಸಿರಾಟದ ಸಮಸ್ಯೆಗಳನ್ನು ದೂರಮಾಡುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...