Kannada Duniya

ಚಳಿಗಾಲದಲ್ಲಿ ಬೆಳ್ಳುಳ್ಳಿಯನ್ನು ತಪ್ಪದೇ ಸೇವಿಸಿ ನೋಡಿ

ಚಳಿಗಾಲದಲ್ಲಿ ಶೀತ ಜ್ವರ ಮೊದಲಾದ ಸಣ್ಣಪುಟ್ಟ ರೋಗಗಳು ಬಹುಬೇಗ ಆವರಿಸಿಕೊಳ್ಳುತ್ತವೆ. ಇದರ ವಿರುದ್ಧ ಹೋರಾಡುವ ಗುಣ ಬೆಳ್ಳುಳ್ಳಿಗೆ ಇದೆ. ನಿಯಮಿತವಾಗಿ ಬೆಳ್ಳುಳ್ಳಿ ಸೇವನೆ ಮಾಡುತ್ತಾ ಬರುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಹಾಗೂ ವಿವಿಧ ರೋಗಗಳ ವಿರುದ್ಧ ಹೋರಾಡುವುದು ಸುಲಭವಾಗುತ್ತದೆ.

ಬೆಳ್ಳುಳ್ಳಿಯಲ್ಲಿರುವ ಆಂಟಿ ಆಕ್ಸಿಡೆಂಟ್ ಗಳು ದೇಹದ ಜೀವಕೋಶಗಳನ್ನು ಸ್ವತಂತ್ರ ರಾಡಿಕಲ್ಸ್ ಗಳಿಂದ ಹಾನಿಯಾಗದಂತೆ ನೋಡಿಕೊಳ್ಳುತ್ತದೆ. ಇದು ದೇಹದ ಉಷ್ಣತೆಯನ್ನು ಹೆಚ್ಚಿಸುತ್ತದೆ ಮತ್ತು ಶೀತವನ್ನು ಕಡಿಮೆ ಮಾಡುತ್ತದೆ. ರಕ್ತ ಪರಿಚಲನೆಯನ್ನು ಚುರುಕುಗೊಳಿಸುತ್ತದೆ.

ಚಳಿಗಾಲದಲ್ಲಿ ಬೆಳ್ಳುಳ್ಳಿ ಸೇವನೆಯಿಂದ ಹೃದಯದ ರಕ್ತನಾಳಗಳ ಆರೋಗ್ಯ ಸುಧಾರಿಸುತ್ತದೆ. ಇದು ರಕ್ತದೊತ್ತಡ ಹಾಗೂ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ
ಮಾಡಿ ಹೃದಯಾಘಾತದ ಅಪಾಯವನ್ನು ತಪ್ಪಿಸುತ್ತದೆ.

ಬೆಳ್ಳುಳ್ಳಿ ಚಟ್ನಿ ಅಥವಾ ತರಕಾರಿಗಳಿಗೆ ಬೆಳ್ಳುಳ್ಳಿ ಸೇರಿಸಿ ತಿನ್ನುವುದರಿಂದ ಚಳಿಗಾಲದಲ್ಲಿ ಪದೇಪದೇ ಕಾಣುವ ನೆಗಡಿ ಹಾಗೂ ಕೆಮ್ಮಿನ ಸಮಸ್ಯೆಗಳಿಂದ
ದೂರವಿರಬಹುದು. ಜೀರ್ಣಕ್ರಿಯೆಯನ್ನು ಚುರುಕುಗೊಳಿಸುವ ಗುಣವು ಬೆಳ್ಳುಳ್ಳಿಗೆ ಇದೆ.

 


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...