Kannada Duniya

ಜೀರ್ಣಕ್ರಿಯೆ ಉತ್ತಮವಾಗಿರಲು ಈ ಆಹಾರ ಸೇವಿಸಿ….!

ನಮ್ಮ ದೇಹದಲ್ಲಿ ಜೀರ್ಣಕ್ರಿಯೆ ಉತ್ತಮವಾಗಿದ್ದರೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳು ಸಿಗುತ್ತದೆ. ಇದರಿಂದ ದೇಹ ಕಾಯಿಲೆ ಬೀಳುವುದನ್ನು ತಪ್ಪಿಸಬಹುದು. ಆದರೆ ಕೆಲವರು ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಾರೆ. ಹಾಗಾಗಿ ನಿಮ್ಮ ಜೀರ್ಣಕ್ರಿಯೆಯನ್ನು ಉತ್ತಮವಾಗಿಡಲು ಈ ಆಹಾರವನ್ನು ಸೇವಿಸಿ.

ಹುದುಗಿದ ಆಹಾರವನ್ನು ಹೆಚ್ಚು ಸೇವಿಸಿ. ಇದು ಜೀರ್ಣಕ್ರಿಯೆಯನ್ನು ಉತ್ತಮವಾಗಿಡುತ್ತದೆ. ಇದು ಸುಲಭವಾಗಿ ಜೀರ್ಣವಾಗುತ್ತದೆ. ಹಾಗಾಗಿ ಮೊಸರು, ಮಜ್ಜಿಗೆಯನ್ನು ಸೇವಿಸಿ. ಇವು ಕರುಳಿನಲ್ಲಿ ಜೀರ್ಣಕ್ರಿಯೆಗೆ ಸಹಾಯ ಮಾಡುವಂತಹ ಉತ್ತಮ ಬ್ಯಾಕ್ಟೀರಿಯಾಗಳನ್ನು ಹೆಚ್ಚಿಸುತ್ತದೆ.

ನೀವು ಕರಿಬೇವಿನ ಎಲೆಗಳನ್ನು ಈ ರೀತಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಮಟ್ಟವು 100% ರಷ್ಟು ಕಡಿಮೆಯಾಗುತ್ತೆ..!

ಧಾನ್ಯಗಳನ್ನು ಸೇವಿಸಿ ಅಥವಾ ಧಾನ್ಯಗಳ ಹಿಟ್ಟಿನಿಂದ ತಯಾರಿಸಿದ ಆಹಾರವನ್ನು ಸೇವಿಸಿ. ಇದರಲ್ಲಿ ಫೈಬರ್ ಅಂಶ ಸಮೃದ್ಧವಾಗಿರುತ್ತದೆ. ಹಾಗಾಗಿ ಇದು ಜೀರ್ಣಕ್ರಿಯೆ ಸಮಸ್ಯೆಯನ್ನು ಹೋಗಲಾಡಿಸುತ್ತದೆ. ಇದರಿಂದ ಮಲಬದ್ಧತೆ ಸಮಸ್ಯೆ ಕೂಡ ಕಾಡುವುದಿಲ್ಲ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...