Kannada Duniya

ನಿಮ್ಮ ತೂಕವನ್ನು ಕಳೆದುಕೊಳ್ಳಲು ವಿನೆಗರ್ ಅನ್ನು ಹೀಗೆ ಬಳಸಿ

ಜನರು ತಮ್ಮ ಕೆಟ್ಟ ಆಹಾರ ಪದ್ಧತಿಯಿಂದ ತೂಕ ಹೆಚ್ಚಳ ಸಮಸ್ಯೆಗೆ ಒಳಗಾಗುತ್ತಾರೆ. ನಂತರ ಈ ತೂಕವನ್ನು ಕಡಿಮೆ ಮಾಡಿಕೊಳ್ಳಲು ಹಲವಾರು ಕ್ರಮಗಳನ್ನು ಅನುಸರಿಸುತ್ತಾರೆ. ಆದರೆ ಏನೇ ಮಾಡಿದರೂ ನಿಮ್ಮ ತೂಕ ಕಡಿಮೆಯಾಗದಿದ್ದರೆ ವಿನೆಗರ್ ಅನ್ನು ಹೀಗೆ ಬಳಸಿ.

ಆ್ಯಪಲ್ ಸೈಡರ್ ವಿನೆಗರ್ ಅನ್ನು ಸೇವಿಸುವುದರಿಂದ ನಿಮ್ಮ ದೇಹದ ಚಯಾಪಚಯ ಕ್ರಿಯೆ ವೇಗವಾಗುತ್ತದೆ. ಇದರಿಂದ ದೇಹದಲ್ಲಿರುವ ಹೆಚ್ಚುವರಿ ಕೊಬ್ಬು ಕರಗುತ್ತದೆ. ಅಲ್ಲದೇ ವಿನೆಗರ್ ನಲ್ಲಿ ಫೈಬರ್ ಅಂಶವಿದ್ದು, ಇದು ನಿಮ್ಮ ಹಸಿವನ್ನು ಕಡಿಮೆ ಮಾಡುತ್ತದೆ. ಇದರಿಂದ ನೀವು ಅತಿಯಾಗಿ ತಿನ್ನುವುದನ್ನು ತಪ್ಪಿಸಬಹುದು.

ಹಾಗಾಗಿ 2 ಚಮಚ ವಿನೆಗರ್ ಅನ್ನು ಒಂದು ಲೋಟ ನೀರಿನಲ್ಲಿ ಬೆರೆಸಿ ಊಟಕ್ಕೆ ಮುಂಚಿತವಾಗಿ ಕುಡಿಯಿರಿ. ಅಥವಾ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯಬಹುದು. ಅಥವಾ ವಿನೆಗರ್ ಅನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಇದರಿಂದ ತೂಕ ಕಡಿಮೆಯಾಗುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...