Kannada Duniya

ನೀವು ಈ ಸಮಸ್ಯೆಯಿಂದ ಬಳಲುತ್ತಿದ್ದರೆ ಅಪ್ಪಿತಪ್ಪಿಯೂ ಪಾಲಕ್ ಸೇವಿಸಬೇಡಿ…!

ಪಾಲಕ್ ಸೊಪ್ಪು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಹಲವು ಪೋಷಕಾಂಶಗಳಿವೆ. ಇದು ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತದೆ. ಇದರಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ಮೆಗ್ನೀಶಿಯಂ, ಪೊಟ್ಯಾಶಿಯಂ ಸಮೃದ್ಧವಾಗಿದೆ. ಆದರೆ ಇದನ್ನು ಈ ಜನರು ಸೇವಿಸಬೇಡಿ. ಇದರಿಂದ ಹಾನಿಕಾರಕವಾಗಬಹುದು.

ಅಲರ್ಜಿ ಸಮಸ್ಯೆ ಇರುವವರು ಪಾಲಕ್ ಸೊಪ್ಪನ್ನು ಸೇವಿಸಬೇಡಿ. ಇದರಲ್ಲಿ ಹಿಸ್ಟಮೈನ್ ಕಂಡುಬರುತ್ತದೆ. ಇದು ಕೆಲವು ಜನರಲ್ಲಿ ಅಲರ್ಜಿ ಸಮಸ್ಯೆಯನ್ನು ಉಂಟುಮಾಡುತ್ತದೆ.

ಮೂತ್ರಪಿಂಡದಲ್ಲಿ ಕಲ್ಲಿನ ಸಮಸ್ಯೆ ಇರುವವರು ಪಾಲಕ್ ಸೊಪ್ಪನ್ನು ಸೇವಿಸಬೇಡಿ. ಯಾಕೆಂದರೆ ಇದು ಮೂತ್ರಪಿಂಡದಲ್ಲಿ ಕಲ್ಲಿನ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಬಹುದು. ಇದರಿಂದ ಸಾಕಷ್ಟು ಸಮಸ್ಯೆಗಳು ಉಂಟಾಗುತ್ತದೆ.

ಯಶಸ್ಸು ಪಡೆಯಲು ಸೋಮವಾರ ಈ ವಿಶೇಷ ತಂತ್ರವನ್ನು ಮಾಡಿ….!

ಕೊಲೆಸ್ಟ್ರಾಲ್ ಗೆ ಔಷಧಿಯನ್ನು ತೆಗೆದುಕೊಳ್ಳುವವರು ಪಾಲಕ್ ಸೊಪ್ಪನ್ನು ಸೇವಿಸಬೇಡಿ. ಇದರಲ್ಲಿ ವಿಟಮಿನ್ ಕೆ ಕಂಡುಬರುತ್ತದೆ. ಇದು ರಕ್ತವನ್ನು ತೆಳುವಾಗಿಸಿ ದೇಹದ ಮೇಲೆ ನಕರಾತ್ಮಕ ಪರಿಣಾಮವನ್ನು ಬೀರುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...