Kannada Duniya

ಪಾಲಕ್ ಸೊಪ್ಪು ಯಾವ ರೀತಿ ಪ್ರಯೋಜನಕಾರಿ ಎಂಬುದನ್ನು ತಿಳಿಯಿರಿ…!

ಪಾಲಕ್ ಸೊಪ್ಪು ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಪ್ರೋಟೀನ್, ನಾರಿನಾಂಶ, ಕಬ್ಬಿಣಾಂಶ, ಕ್ಯಾಲ್ಸಿಯಂ, ವಿಟಮಿನ್ ಗಳು ಹೇರಳವಾಗಿದೆ. ಇದು ವೃದ್ಧರಿಗೆ, ವಯಸ್ಕರಿಗೆ ಹಾಗೂ ಮಕ್ಕಳಿಗೆ ತುಂಬಾ ಉಪಯುಕ್ತವಾಗಿದೆ. ಇದನ್ನು ಸೇವಿಸುವುದರಿಂದ ಇಡೀ ಕುಟುಂಬದವರು ಪ್ರಯೋಜನವನ್ನು ಪಡೆಯಬಹುದು.

-ಪಾಲಕ್ ಸೊಪ್ಪಿನಲ್ಲಿ ಕ್ಯಾಲ್ಸಿಯಂ ಇದೆ. ಮಕ್ಕಳು ಪಾಲಕ್ ಸೊಪ್ಪನ್ನು ಸೇವಿಸಿದರೆ ಬೆಳವಣಿಗೆಗೆ ತುಂಬಾ ಸಹಕಾರಿಯಾಗಿದೆ. ಮತ್ತು ಅದು ಮೂಳೆಗಳನ್ನು ಗಟ್ಟಿಗೊಳಿಸುತ್ತದೆ. ಇದರಲ್ಲಿರುವ ವಿಟಮಿನ್ ಎ ಮಕ್ಕಳ ದೃಷ್ಟಿಯನ್ನು ವೇಗಗೊಳಿಸುತ್ತದೆ. ಅಲ್ಲದೇ ಇದು ಮಕ್ಕಳ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

-ವಯಸ್ಕರು ಪಾಲಕ್ ಸೊಪ್ಪನ್ನು ಸೇವಿಸುವುದರಿಂದ ರಕ್ತದೊತ್ತಡ, ಮತ್ತು ಮಾನಸಿಕ ಒತ್ತಡವನ್ನು ಕಡಿಮೆಮಾಡಬಹುದು. ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಗಳು ಒತ್ತಡದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಹೃದಯದ ಆರೋಗ್ಯವನ್ನು ಉತ್ತಮವಾಗಿಸುತ್ತದೆ.

-ಇದರಲ್ಲಿ ಕಬ್ಬಿಣಾಂಶ ಹೇರಳವಾಗಿರುವುದರಿಂದ ಗರ್ಭಿಣಿಯರಿಗೆ ಇದು ಪ್ರಯೋಜನಕಾರಿಯಾಗಿದೆ. ಇದು ರಕ್ತವನ್ನು ಹೆಚ್ಚಿಸುತ್ತದೆ. ಹಾಗೇ ಇದರಲ್ಲಿರುವ ಪೋಲೇಟ್ ಗರ್ಭಿಣಿಯರ ಮಗುವಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ.

ಕ್ಯಾನ್ಸರ್ ನಿಂದ ದೂರವಿರಲು ಬಯಸುವವರು ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ…..!

-ವಯಸ್ಸಾದವರ ಮೂಳೆ ದುರ್ಬಲಗೊಳ್ಳುತ್ತದೆ. ಅಲ್ಲದೇ ದೃಷ್ಟಿ ಮತ್ತು ರಕ್ತದೊತ್ತಡ ಸಮಸ್ಯೆಯೂ ಹೆಚ್ಚಾಗುತ್ತದೆ. ಹಾಗಾಗಿ ವಯಸ್ಸಾದವರು ಪಾಲಕ್ ಸೊಪ್ಪನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...