Kannada Duniya

ಮಕರಾಸನವನ್ನು ಮಾಡುವುದರಿಂದ ಏನೆಲ್ಲಾ ಪ್ರಯೋಜನವಿದೆ ಎಂಬುದನ್ನು ತಿಳಿದುಕೊಳ್ಳಿ

ಯೋಗ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇಂದಿನ ಒತ್ತಡದ ಜೀವನಶೈಲಿಯಲ್ಲಿ ಯೋಗಾಭ್ಯಾಸ ಮಾಡುವುದರಿಂದ ಮನಸ್ಸು ಶಾಂತವಾಗಿರುತ್ತದೆ. ಇದರಿಂದ ನಿಮ್ಮ ಆರೋಗ್ಯವೂ ವೃದ್ಧಿಯಾಗುತ್ತದೆ. ಹಾಗಾಗಿ ಮಕರಾಸನವನ್ನು ಅಭ್ಯಾಸ ಮಾಡಿ ಈ ಪ್ರಯೋಜನ ಪಡೆಯಿರಿ.

ಮಕರಾಸನ ಮಾಡುವುದರಿಂದ ಜೀರ್ಣಾಂಗ ವ್ಯವಸ್ಥೆ ಆರೋಗ್ಯವಾಗಿರುತ್ತದೆ. ಇದು ದಣಿವು ಮತ್ತು ದೇಹದ ನೋವನ್ನು ನಿವಾರಿಸುತ್ತದೆ. ಇದು ಕಿಬ್ಬೊಟ್ಟೆಯ ಸ್ನಾಯುಗಳನ್ನು ಟೋನ್ ಮಾಡುತ್ತದೆ. ಇದರಿಂದ ಮಲಬದ್ಧತೆ ಸಮಸ್ಯೆ ಕಾಡುವುದಿಲ್ಲ. ಹಾಗೇ ಇದು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದು ಉಸಿರಾಟದ ಸಮಸ್ಯೆಗಳನ್ನು ನಿವಾರಿಸುತ್ತದೆ. ಬೆನ್ನು ಮೂಳೆಯನ್ನು ಹೊಂದಿಕೊಳ್ಳುವಂತೆ ಮಾಡುತ್ತದೆ. ಇದರಿಂದ ಬೆನ್ನು ನೋವಿನ ಸಮಸ್ಯೆ ಕಾಡುವುದಿಲ್ಲ.

ಈ ಆಸನ ಮಾಡಲು ನೆಲದ ಮೇಲೆ ಹೊಟ್ಟೆಯ ಮೇಲೆ ಮಲಗಿ. ನಿಮ್ಮ ಎರಡೂ ಮೊಣಕೈಗಳನ್ನು ನೆಲದ ಮೇಲೆ ಇರಿಸಿ ನಿಮ್ಮ ತಲೆ ಮತ್ತು ಭುಜಗಳನ್ನು ಮೇಲಕ್ಕೆ ಎತ್ತಿ. ಅಂಗೈಗಳನ್ನು ಸ್ಟ್ಯಾಂಡ್ ಮಾಡಿ ಅದರ ಮೇಲೆ ಗಲ್ಲವನ್ನು ಇರಿಸಿ ಆಳವಾಗಿ ಉಸಿರನ್ನು ತೆಗೆದುಕೊಂಡು ನಂತರ ಬಿಡುಗಡೆಮಾಡಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...