Kannada Duniya

ಮಲಬದ್ದತೆ ಸಮಸ್ಯೆಯನ್ನು ಹೋಗಲಾಡಿಸಲು ಈ ಟೀ ಕುಡಿಯಿರಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರಲ್ಲಿ ಮಲಬದ್ಧತೆ ಸಮಸ್ಯೆ ಕಾಡುತ್ತದೆ. ಇದಕ್ಕೆ ನಮ್ಮ ಕೆಟ್ಟ ಆಹಾರ ಪದ್ಧತಿಯೇ ಕಾರಣ. ಹಾಗಾಗಿ ಮಲಬದ್ಧತೆಯನ್ನು ನಿಯಂತ್ರಿಸಬೇಕು. ಇಲ್ಲವಾದರೆ ಇದರಿಂದ ಹಲವು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಮಲಬದ್ಧತೆ ಸಮಸ್ಯೆಯನ್ನು ಹೋಗಲಾಡಿಸಲು ಈ ಟೀ ಕುಡಿಯಿರಿ.

ಶುಂಠಿ ಟೀ ಮಲಬದ್ಧತೆ ಸಮಸ್ಯೆಯನ್ನು ಹೋಗಲಾಡಿಸುತ್ತದೆ. ಇದು ಆಹಾರವನ್ನು ಸುಲಭವಾಗಿ ಜೀರ್ಣವಾಗುವಂತೆ ಮಾಡುತ್ತದೆ. ಅಲ್ಲದೇ ಗ್ಯಾಸ್ , ಆ್ಯಸಿಡಿಟಿ ಸಮಸ್ಯೆಯನ್ನು ಹೋಗಲಾಡಿಸುತ್ತದೆ. ಇದರಿಂದ ಮಲಬದ್ಧತೆ ಸಮಸ್ಯೆ ಕೂಡ ನಿವಾರಣೆಯಾಗುತ್ತದೆ.

ಈ ಶುಂಠಿ ಟೀ ತಯಾರಿಸಲು ಒಂದೂವರೆ ಕಪ್ ನೀರಿಗೆ ಶುಂಠಿ ತುಂಡುಗಳನ್ನು ಬೆರೆಸಿ ಚೆನ್ನಾಗಿ ಕುದಿಸಿ. ನೀರು ಒಂದು ಲೋಟಕ್ಕೆ ಬಂದ ನಂತರ ಅದನ್ನು ಸೋಸಿ, ತಣ್ಣಗಾಗಿಸಿ ನಂತರ ಅದಕ್ಕೆ ಜೇನುತುಪ್ಪವನ್ನು ಬೆರೆಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಇದರಿಂದ ಮಲ ಸಡಿಲವಾಗಿ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...