Kannada Duniya

ಮಸಾಲೆ ಪದಾರ್ಥಗಳನ್ನು ಸೇವಿಸಿ ಗ್ಯಾಸ್ಟ್ರಿಕ್ ಸಮಸ್ಯೆ ಕಾಡುತ್ತಿದ್ದರೆ ಈ ಮನೆಮದ್ದನ್ನು ಸೇವಿಸಿ….!

ಹಬ್ಬಗಳ ಸಂದರ್ಭದಲ್ಲಿ ಮನೆಯಲ್ಲಿ ವಿಶೇಷವಾದ ಭೋಜನಗಳನ್ನು ತಯಾರಿಸುತ್ತಾರೆ. ಹಾಗಾಗಿ ಎಲ್ಲರೂ ಸಂಭ್ರಮ ಸಡಗರದಿಂದ ಊಟ ಉಪಹಾರಗಳನ್ನು ಮಾಡುತ್ತಾರೆ. ಆದರೆ ಇದರಿಂದ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ಕಾಡುತ್ತದೆ. ಹಾಗಾಗಿ ಅದನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.

ಗ್ಯಾಸ್ಟ್ರಿಕ್ ಸಮಸ್ಯೆಯನ್ನು ನಿವಾರಿಸಲು ಶುಂಠಿ ಕಷಾಯವನ್ನು ಕುಡಿಯಿರಿ. ಬಿಸಿ ನೀರಿಗೆ ಶುಂಠಿಯನ್ನು ಹಾಕಿ ಚೆನ್ನಾಗಿ ಕುದಿಸಿ ನಂತರ ಅದನ್ನು ಸೋಸಿ ಜೇನುತುಪ್ಪವನ್ನು ಸೇರಿಸಿ ಕುಡಿಯಿರಿ.

ಹಾಗೇ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ನಿವಾರಿಸಲು ದಾಲ್ಚಿನ್ನಿ ಕಷಾಯವನ್ನು ಕುಡಿಯಿರಿ. ಬಿಸಿ ನೀರಿಗೆ ದಾಲ್ಚಿನ್ನಿ, ಜೀರಿಗೆ, ಹಾಕಿ ಚೆನ್ನಾಗಿ ಕುದಿಸಿ, ನಂತರ ಅದಕ್ಕೆ ಜೇನುತುಪ್ಪವನ್ನು ಬೆರೆಸಿ ಕುಡಿಯಿರಿ.

ಚಳಿಗಾಲದಲ್ಲಿ ಮೊಸಂಬಿ ಜ್ಯೂಸ್ ಕುಡಿದರೆ ಏನಾಗುತ್ತದೆ ಗೊತ್ತಾ…?

ಜೀರಿಗೆ ಕಷಾಯ ಗ್ಯಾಸ್ಟ್ರಿಕ್ ಸಮಸ್ಯೆಗೆ ಉತ್ತಮ ಮನೆಮದ್ದಾಗಿದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿಡುತ್ತದೆ. ಹಾಗಾಗಿ ನೀರಿಗೆ ಜೀರಿಗೆ ಪುಡಿಯನ್ನು ಬೆರೆಸಿ ಚೆನ್ನಾಗಿ ಕುದಿಸಿ ಫಿಲ್ಟರ್ ಮಾಡಿ ಕುಡಿಯಿರಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...