Kannada Duniya

ರಜದಿನಗಳಲ್ಲಿ ನಿಮ್ಮ ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಈ ಸಲಹೆ ಪಾಲಿಸಿ….!

ದಿನವಿಡೀ ಕೆಲಸ ಮಾಡಿ ಬೇಸರವಾದವರು ರಜಾದಿನಗಳಲ್ಲಿ ತುಂಬಾ ಮೋಜುಮಸ್ತಿ ಮಾಡುತ್ತಾರೆ. ಆ ವೇಳೆ ರುಚಿಕರವಾದ ಆಹಾರ, ಪಾನೀಯ, ಆಲ್ಕೋಹಾಲ್ ಸೇವನೆಯನ್ನು ಮಾಡುವ ಮೂಲಕ ಸಂಭ್ರವಿಸುತ್ತಾರೆ. ಆ ಸಂದರ್ಭದಲ್ಲಿ ಅವರು ಅತಿಯಾದ ಉಪ್ಪು, ಸಕ್ಕರೆ, ಕೊಬ್ಬಿನ ಪದಾರ್ಥಗಳನ್ನು ಸೇವಿಸುತ್ತಾರೆ. ಆದರೆ ಇದು ಹೃದಯಕ್ಕೆ ಒಳ್ಳೆಯದಲ್ಲ.

ರಜಾದಿನಗಳಲ್ಲಿ ನಿಮ್ಮ ಹೃದಯದ ಆರೋಗ್ಯವನ್ನು ಹೀಗೆ ಕಾಪಾಡಿಕೊಳ್ಳಿ.
ಕೆಲಸದ ಸಮಯದಲ್ಲಿ ನೀವು ಒತ್ತಡವನ್ನು ಅನುಭವಿಸುತ್ತೀರಿ. ಇದು ಹೃದಯಕ್ಕೆ ಒಳ್ಳೆಯದಲ್ಲ. ಹಾಗಾಗಿ ರಜಾ ದಿನಗಳಲ್ಲಿ ನಿಮ್ಮ ನೆಚ್ಚಿನ ಸ್ಥಳಗಳಿಗೆ ಹೋಗಿ ವಿಶ್ರಾಂತಿ ಪಡೆಯಿರಿ. ಇದು ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

-ಆಲ್ಕೋಹಾಲ್ ಸೇವನೆ ನಿಮ್ಮ ರಕ್ತದೊತ್ತಡ ಮತ್ತು ಹೃದಯದ ಬಡಿತವನ್ನು ಹೆಚ್ಚಿಸುತ್ತದೆ. ಇದರಿಂದ ಹೃದಯಾಘಾತ ಮತ್ತು ಪಾರ್ಶ್ವಲವಾಯು ಸಮಸ್ಯೆ ಕಾಡಬಹುದು. ಹಾಗಾಗಿ ರಜಾದಿನಗಳಲ್ಲಿ ಆಲ್ಕೋಹಾಲ್ ಸೇವನೆಯನ್ನು ತಪ್ಪಿಸಿ.

-ಕೆಲಸದ ಕಾರಣ ಕೆಲವರು ಸಾಕಷ್ಟು ನಿದ್ರೆ ಮಾಡುವುದಿಲ್ಲ. ಇದು ನಿಮ್ಮ ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ರಜಾದಿನಗಳಲ್ಲಿ ಸಾಕಷ್ಟು ನಿದ್ರೆ ಮಾಡಿ. ವಿಶ್ರಾಂತಿ ಪಡೆಯಿರಿ. ಇದು ನಿಮ್ಮ ಒತ್ತಡ ಮತ್ತು ಖಿನ್ನತೆಯನ್ನು ದೂರಮಾಡುತ್ತದೆ.

-ರಜಾದಿನಗಳಲ್ಲಿ ನಿಯಮಿತವಾಗಿ ವ್ಯಾಯಾಮಗಳನ್ನು ಮಾಡಿ. ಇದು ರಕ್ತಪರಿಚಲೆನಯನ್ನು ಹೆಚ್ಚಿಸುತ್ತದೆ. ಇದರಿಂದ ಒತ್ತಡ ನಿವಾರಣೆಯಾಗುತ್ತದೆ ಮತ್ತು ಹೃದಯ ಆರೋಗ್ಯವಾಗಿರುತ್ತದೆ.

-ರಜಾದಿನಗಳಲ್ಲಿ ಪಾರ್ಟಿಯಲ್ಲಿ ಪಾಲ್ಗೊಳ್ಳುವ ಮೊದಲು ಹೆಚ್ಚು ಮೊಸರು ಮತ್ತು ಹಣ್ಣುಗಳನ್ನು ಸೇವಿಸಿ. ಇವು ನಿಮ್ಮ ದೇಹಕ್ಕೆ ಶಕ್ತಿ ನೀಡುತ್ತವೆ. ಮತ್ತು ಹಸಿವನ್ನು ಕಡಿಮೆ ಮಾಡುತ್ತವೆ. ಹಾಗಾಗಿ ಪಾರ್ಟಿಯಲ್ಲಿ ನೀವು ಕೊಬ್ಬಿನಾಂಶವಿರುವ ಮತ್ತು ಉಪ್ಪು ಹೊಂದಿರುವ ಪದಾರ್ಥಗಳ ಸೇವನೆಯನ್ನು ತಪ್ಪಿಸುವಂತಾಗುತ್ತದೆ.

 

 


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...