Kannada Duniya

ಹೆಚ್ಚು ಕಲ್ಲಂಗಡಿ ಹಣ್ಣನ್ನು ಬೇಸಿಗೆಯಲ್ಲಿ ತಿನ್ನುವುದರಿಂದ ಏನಾಗುತ್ತದೆ ಗೊತ್ತಾ…?

ಬೇಸಿಗೆಕಾಲದಲ್ಲಿ ಹೆಚ್ಚಾಗಿ ಕಲ್ಲಂಗಡಿ ಹಣ್ಣು ಸಿಗುತ್ತದೆ. ಇದನ್ನು ತಿನ್ನಲು ಎಲ್ಲರೂ ಇಷ್ಟಪಡುತ್ತಾರೆ. ಇದು ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಆದರೆ ಈ ಹಣ್ಣನ್ನು ಬೇಸಿಗೆಯಲ್ಲಿ ಅತಿಯಾಗಿ ತಿಂದರೆ ಈ ಸಮಸ್ಯೆಗಳು ಕಾಡಬಹುದು.

ಕಲ್ಲಂಗಡಿ ಹಣ್ಣಿನಲ್ಲಿ ಗ್ಲೈಸೆಮಿಕ್ ಸೂಚ್ಯಂಕ ಹೆಚ್ಚಾಗಿದೆ. ಹಾಗಾಗಿ ಈ ಹಣ್ಣನ್ನು ಮಧುಮೇಹಿಗಳು ಅತಿಯಾಗಿ ಸೇವಿಸಿದರೆ ಆರೋಗ್ಯಕ್ಕೆ ಹಾನಿಕಾರಕ. ಇದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗುತ್ತದೆ. ಇದರಿಂದ ಮಧುಮೇಹ ಸಮಸ್ಯೆ ಹೆಚ್ಚಾಗಿ ಆರೋಗ್ಯ ಕೆಡಬಹುದು.

Aloe Vera for Diabetes: ಅಲೋವೆರಾ ಅನ್ನು ಈ ರೀತಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ…!

ಹಾಗೇ ದೇಹದಲ್ಲಿ ನೀರಿನಾಂಶ ಹೆಚ್ಚಾಗಿ ದೇಹದಲ್ಲಿ ಊತದ ಸಮಸ್ಯೆಯಿಂದ ಬಳಲುತ್ತಿರುವವರು ಈ ಹಣ್ಣನ್ನು ಸೇವಿಸಬೇಡಿ. ಯಾಕೆಂದರೆ ಇದರಲ್ಲಿ ನೀರಿನಾಂಶ ಹೆಚ್ಚಾಗಿದೆ. ಅಲ್ಲದೇ ಪಿತ್ತಜನಕಾಂಗದಲ್ಲಿ ಉರಿಯೂತ, ಗ್ಲೂಕೋಸ್ ಮಟ್ಟ ಹೆಚ್ಚಳ, ಜೀರ್ಣಕ್ರಿಯೆ ಸಮಸ್ಯೆಗಳು ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗಬಹುದು.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...