Kannada Duniya

Coconut milk drink: ತೂಕ ಕಡಿಮೆ ಮಾಡಲು ತೆಂಗಿನ ಹಾಲಿನಿಂದ ತಯಾರಿಸಿದ ಈ ಪಾನೀಯ ಸೇವಿಸಿ…!

ಇತ್ತೀಚಿನ ದಿಗಳಲ್ಲಿ ಹೆಚ್ಚಿನವರು ತೂಕ ಹೆಚ್ಚಳ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ತೂಕ ಇಳಿಸಿಕೊಳ್ಳುವುದು ತುಂಬಾ ಕಷ್ಟದ ಕೆಲಸ . ಹಾಗಾಗಿ ಹೆಚ್ಚಿನವರು ತೂಕ ಇಳಿಸಿಕೊಳ್ಳಲು ವ್ಯಾಯಾಮ, ಯೋಗ ಮುಂತಾದವುಗಳನ್ನು ಮಾಡುತ್ತಿದ್ದಾರೆ. ಹಾಗಾಗಿ ನೀವು ಸುಲಭವಾಗಿ ತೂಕ ಇಳಿಸಿಕೊಳ್ಳಲು ಬಯಸಿದ್ದರೆ ತೆಂಗಿನ ಹಾಲಿನಿಂದ ತಯಾರಿಸಿದ ಈ ಪಾನೀಯ ಸೇವಿಸಿ.

ತೆಂಗಿನ ಹಾಲು ತುಂಬಾ ರುಚಿಕರವಾಗಿದ್ದು, ಆರೋಗ್ಯಕ್ಕೂ ತುಂಬಾ ಉತ್ತಮ. ಇದು ಅನೇಕ ಪೌಷ್ಟಿಕಾಂಶದಿಂದ ಸಮೃದ್ಧವಾಗಿದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಚರ್ಮ ಮತ್ತು ಕೂದಲ ಬೆಳವಣಿಗೆಗೆ ಸಹಕಾರಿಯಾಗಿದೆ. ಇಲ್ಲದೇ ಇದು ತೂಕ ಇಳಿಸಿಕೊಳ್ಳಲು ಕೂಡ ಸಹಕಾರಿಯಾಗಿದೆ. ಅದಕ್ಕಾಗಿ ತೆಂಗಿನಹಾಲಿನಿಂದ ಈ ರೀತಿಯಲ್ಲಿ ಪಾನೀಯ ತಯಾರಿಸಿ ಸೇವಿಸಿ.

ಮುಖದ ಚರ್ಮ ಹೊಳೆಯುವಂತೆ ಮಾಡಲು ಈ ಮಿಲ್ಕ್ ಶೇಕ್ ಕುಡಿಯಿರಿ

ತೆಂಗಿನ ಕಾಯಿಯನ್ನು ಮಿಕ್ಸಿಯಲ್ಲಿ ರುಬ್ಬಿ ಹಾಲನ್ನು ತೆಗೆದುಕೊಳ್ಳಿ. ಅದಕ್ಕೆ ಶುಂಠಿ ರಸ, ಸ್ವಲ್ಪ ಕರಿಮೆಣಸಿನ ಪುಡಿ ಮತ್ತು ಜೇನುತುಪ್ಪವನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ಮತ್ತು ಬೆಳಿಗ್ಗೆ ಚಹಾ ಅಥವಾ ಕಾಫಿಯ ಬದಲಾಗಿ ಕುಡಿಯಿರಿ.

Drink this coconut milk based drink for weight loss


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...