Kannada Duniya

ಬೇಸಿಗೆಯಲ್ಲಿ ಈ ತರಕಾರಿಯ ಜ್ಯೂಸ್ ಕುಡಿದರೆ ಆರೋಗ್ಯ ಸಮಸ್ಯೆ ಕಾಡುವುದಿಲ್ಲವಂತೆ!

ಬೇಸಿಗೆಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿರುತ್ತದೆ. ಇದರಿಂದ ದೇಹದಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ಸೌತೆಕಾಯಿಯನ್ನು ಸೇವಿಸಿ. ಇದರಲ್ಲಿ ನೀರಿನಾಂಶ ಹೆಚಾಗಿದ್ದು, ದೇಹವನ್ನು ಆರೋಗ್ಯವಾಗಿಡುತ್ತದೆ.

ಸೌತೆಕಾಯಿಯಲ್ಲಿ ವಿಟಮಿನ್ ಗಳು ಸಮೃದ್ಧವಾಗಿದೆ. ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಗಳು ಹೆಚ್ಚಾಗಿವೆ. ಹಾಗಾಗಿ ಇದನ್ನು ಬೇಸಿಗೆಯಲ್ಲಿ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆಯಂತೆ.

ಅಲ್ಲದೇ ಸೌತೆಕಾಯಿ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಇದರಿಂದ ನಿಮ್ಮ ತೂಕ ಕೂಡ ನಿಯಂತ್ರಣಕ್ಕೆ ಬರುತ್ತದೆ. ಅಲ್ಲದೇ ಇದು ಕ್ಯಾಲೋರಿಗಳನ್ನು ಸುಡಲು ಸಹಾಯ ಮಾಡುತ್ತದೆ.

ಸೌತೆಕಾಯಿಯಲ್ಲಿ ಮೆಗ್ನೀಶಿಯಂ ಸಮೃದ್ಧವಾಗಿರುವ ಕಾರಣ ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಮತ್ತು ಒತ್ತಡವನ್ನು ಕಡಿಮೆ ಮಾಡಿ ಉತ್ತಮ ನಿದ್ರೆಗೆ ಸಹಾಯ ಮಾಡುತ್ತದೆ.

ಅಲ್ಲದೇ ಇದು ತ್ವಚೆಗೆ ಮತ್ತು ಕಣ್ಣಿನ ಆರೋಗ್ಯಕ್ಕೂ ತುಂಬಾ ಒಳ್ಳೆಯದು.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...