Kannada Duniya

ಅಧಿಕ ರಕ್ತದೊತ್ತಡ ಸಮಸ್ಯೆ ಇದ್ದರೆ ಮಲಗಿರುವಾಗ ಈ ತೊಂದರೆಗಳು ಕಾಡುತ್ತದೆಯಂತೆ

ಅಧಿಕ ರಕ್ತದೊತ್ತಡವು ಒಂದು ಗಂಭೀರವಾದ ಸಮಸ್ಯೆಯಾಗಿದೆ. ಇದಕ್ಕೆ ನಮ್ಮ ಕೆಟ್ಟ ಜೀವನಶೈಲಿಯೇ ಕಾರಣ. ಇದರಿಂದ ಹಲವು ಆರೋಗ್ಯ ಸಮಸ್ಯೆಗಳು ಸಂಭವಿಸುತ್ತದೆ. ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರಲ್ಲಿ ಮಲಗಿದ್ದಾಗ ಈ ಸಮಸ್ಯೆಗಳು ಕಾಡುತ್ತದೆಯಂತೆ.

ಅಧಿಕ ರಕ್ತದೊತ್ತಡ ಸಮಸ್ಯೆಯಿದ್ದಾಗ ನಿದ್ರಾಹೀನತೆ ಸಮಸ್ಯೆ ಕಾಡುತ್ತದೆಯಂತೆ. ಯಾಕೆಂದರೆ ರಕ್ತದೊತ್ತಡ ಹೆಚ್ಚಾದಾಗ ನಿದ್ರೆಗೆ ಭಂಗವಾಗುತ್ತದೆ.

ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರಲ್ಲಿ ರಾತ್ರಿ ಮಲಗಿದಾಗ ಗೊರಕೆ ಸಮಸ್ಯೆ ಕಂಡುಬರುತ್ತದೆ. ಅಧಿಕ ರಕ್ತದೊತ್ತಡದಿಂದ ಉಸಿರಾಟದಲ್ಲಿ ಸಮಸ್ಯೆಯಾಗುತ್ತದೆ. ಇದರಿಂದ ಗೊರಕೆ ಶಬ್ದ ಕೇಳುತ್ತದೆ.

ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರು ರಾತ್ರಿಯ ವೇಳೆ ಅತಿಯಾಗಿ ಮೂತ್ರ ವಿಸರ್ಜನೆ ಮಾಡುತ್ತಾರೆ. ಯಾಕೆಂದರೆ ರಕ್ತದೊತ್ತಡ ಹೆಚ್ಚಾದಾಗ ಕಿಡ್ನಿಯ ಮೇಲೆ ಒತ್ತಡ ಹೆಚ್ಚಾಗುತ್ತದೆ. ಇದರಿಂದ ಮೂತ್ರ ಉತ್ಪಾದನೆ ಕೂಡ ಹೆಚ್ಚಾಗುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...