Kannada Duniya

ರಾತ್ರಿ ಬೇಗ ಊಟ ಮಾಡುವುದರಿಂದ ಈ ಆರೋಗ್ಯ ಪ್ರಯೋಜನವನ್ನು ಪಡೆಯಬಹುದಂತೆ

ಹಿಂದಿನ ಕಾಲದವರು ರಾತ್ರಿ 8 ಗಂಟೆಯೊಳಗೆ ಊಟ ಮುಗಿಸುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಜನರು ತಡರಾತ್ರಿಯಲ್ಲಿ ಊಟ ಮಾಡುತ್ತಾರೆ. ಆದರೆ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾದ್ರೆ ರಾತ್ರಿ ಬೇಗ ಊಟ ಮಾಡುವುದರಿಂದ ಈ ಆರೋಗ್ಯ ಪ್ರಯೋಜನವನ್ನು ಪಡೆಯಬಹುದಂತೆ.

ರಾತ್ರಿ ಬೇಗ ಊಟ ಮಾಡುವುದರಿಂದ ನಿದ್ರೆಯ ಗುಣಮಟ್ಟ ಉತ್ತಮವಾಗಿರುತ್ತದೆಯಂತೆ. ಇದರಿಂದ ನಿದ್ರೆ ಮಾಡಲು ಸಾಕಷ್ಟು ಸಮಯ ಸಿಗುತ್ತದೆ.

ರಾತ್ರಿ ಬೇಗ ಊಟ ಮಾಡುವುದು ಹೃದಯದ ಆರೋಗ್ಯಕ್ಕೂ ಒಳ್ಳೆಯದು. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದರಿಂದ ಕೊಬ್ಬು, ಕೊಲೆಸ್ಟ್ರಾಲ್ ಸಮಸ್ಯೆ ಕಾಡುವುದಿಲ್ಲ.

ಇದರಿಂದ ರಾತ್ರಿ ಆಹಾರ ಜೀರ್ಣವಾಗಲು ಸುಲಭವಾಗುತ್ತದೆ. ಇದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಕಾಡುವುದಿಲ್ಲ. ಗ್ಯಾಸ್, ಆ್ಯಸಿಡಿಟಿ, ಮತ್ತು ಹೊಟ್ಟೆ ನೋವಿನ ಸಮಸ್ಯೆ ಕಾಡುವುದಿಲ್ಲ.

ರಾತ್ರಿ ಬೇಗ ಊಟ ಮಾಡುವುದರಿಂದ ತೂಕ ಇಳಿಕೆಗೆ ಸುಲಭವಾಗುತ್ತದೆ. ಇದು ಚಯಾಪಚಯ ಕ್ರಿಯೆನ್ನು ಉತ್ತೇಜಿಸುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...