Kannada Duniya

ಈ ವಸ್ತುಗಳನ್ನು ಚಹಾದೊಂದಿಗೆ ಸೇವಿಸಿದರೆ ಸಮಸ್ಯೆ ಹೆಚ್ಚಾಗಬಹುದು….!

ಕೆಲವರಿಗೆ ಸಂಜೆಯ ವೇಳೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಹಾಗೇ ಅವರು ಚಹಾದ ಜೊತೆಗೆ ಬಿಸ್ಕತ್ ಸೇರಿದಂತೆ ಕೆಲವು ಪದಾರ್ಥಗಳನ್ನು ಸೇವಿಸುತ್ತಾರೆ. ಆದರೆ ಚಹಾದೊಂದಿಗೆ ಕೆಲವು ಪದಾರ್ಥಗಳನ್ನು ಸೇವಿಸುವುದರಿಂದ ನಿಮ್ಮ ಆರೋಗ್ಯ ಹದಗೆಡಬಹುದು. ಹಾಗಾದ್ರೆ ಆ ವಸ್ತುಗಳು ಯಾವುದೆಂಬುದನ್ನು ತಿಳಿದುಕೊಳ್ಳೋಣ.

ಚಹಾದೊಂದಿಗೆ ನೀರನ್ನು ಕುಡಿಯಬಾರದು. ಯಾಕೆಂದರೆ ಅನೇಕ ಜನರು ಚಹಾ ಕುಡಿದ ಬಳಿಕ ನೀರನ್ನು ಕುಡಿಯುತ್ತಾರೆ. ಇದು ಅವರ ಆರೋಗ್ಯವನ್ನು ಹದಗೆಡಿಸುತ್ತದೆ. ಇದರಿಂದ ಆ್ಯಸಿಡಿಟಿ ಸಮಸ್ಯೆ ಉಂಟಾಗುತ್ತದೆ.

Eating Tomatoes on empty stomach: ಖಾಲಿ ಹೊಟ್ಟೆಯಲ್ಲಿ ಟೊಮೆಟೊ ಸೇವಿಸಿದರೆ ಏನಾಗುತ್ತದೆ ಗೊತ್ತಾ…?

ಚಹಾದೊಂದಿಗೆ ನಿಂಬೆಯನ್ನು ಬಳಸಬೇಡಿ. ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇದರಿಂದ ಹೊಟ್ಟೆಯಲ್ಲಿ ಸಮಸ್ಯೆ ಉಂಟಾಗಬಹುದು.

ಚಹಾದೊಂದಿಗೆ ಹಸಿರು ತರಕಾರಿಗಳು ಮತ್ತು ಒಣ ಹಣ್ಣುಗಳನ್ನು ತಿನ್ನಬೇಡಿ. ಇದರಲ್ಲಿರುವ ಕಬ್ಬಿಣಾಂಶವು ದೇಹದಲ್ಲಿ ರಾಸಾಯನಿಕ ಕ್ರಿಯೆಯ ವೇಳೆ ಕೆಟ್ಟ ಪರಿಣಾಮಬೀರುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...