Kannada Duniya

Eating Tomatoes on empty stomach: ಖಾಲಿ ಹೊಟ್ಟೆಯಲ್ಲಿ ಟೊಮೆಟೊ ಸೇವಿಸಿದರೆ ಏನಾಗುತ್ತದೆ ಗೊತ್ತಾ…?

ಟೊಮೆಟೊವನ್ನು ಅಡುಗೆಯಲ್ಲಿ ಬಳಸುತ್ತಾರೆ. ಇದು ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ. ಇದು ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ. ಇದರಲ್ಲಿ ಹಲವು ಪೋಷಕಾಂಶಗಳಿವೆ. ಆದರೆ ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಏನಾಗುತ್ತದೆ ಎಂಬುದನ್ನು ತಿಳಿಯಿರಿ.

ಟೊಮೆಟೊ ಹೊಟ್ಟೆಯ ಶಾಖವನ್ನು ಕಡಿಮೆ ಮಾಡುತ್ತದೆ. ಹಾಗಾಗಿ ನಿಮಗೆ ಹೊಟ್ಟೆಯಲ್ಲಿ ತುಂಬಾ ಉರಿ ಇದ್ದರೆ ಟೊಮೆಟೊವನ್ನು ಕತ್ತರಿಸಿ ಅದಕ್ಕೆ ಕರಿಮೆಣಸು ಬೆರೆಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಿರಿ.

ಇದನ್ನು ಪ್ರತಿದಿನ ಮಾಡಿದರೆ ಹುಳುವಿನ ಸಮಸ್ಯೆಯು ನಿವಾರಣೆಯಾಗುತ್ತದೆ.

ಟೊಮೆಟೊ ಹೃದಯ ಸಂಬಂಧಿ ಸಮಸ್ಯೆಗಳನ್ನು ನಿವಾರಿಸುತ್ತದೆ. ಹಾಗಾಗಿ ಟೊಮೆಟೊವನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ರಕ್ತನಾಳಗಳಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ. ಇದರಿಂದ ಹೃದಯಾಘಾತ, ಪಾರ್ಶ್ವವಾಯುವಿನ ಸಮಸ್ಯೆ ಕಾಡಲ್ಲ.

Immunity building foods: ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಲು ಇವುಗಳನ್ನುಖಾಲಿ ಹೊಟ್ಟೆಯಲ್ಲಿ ಸೇವಿಸಿ…!

ನಿಮ್ಮ ದೃಷ್ಟಿಯನ್ನು ಹೆಚ್ಚಿಸಲು ಟೊಮೆಟೊವನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. ಟೊಮೆಟೊದಲ್ಲಿ ವಿಟಮಿನ್ ಎ ಕಂಡುಬರುತ್ತದೆ. ಇದು ದೃಷ್ಟಿಗೆ ಪ್ರಯೋಜನಕಾರಿಯಾಗಿದೆ. ಆದ್ದರಿಂದ ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...