Kannada Duniya

ಮಹಿಳೆಯರಿಗೆ ಲೈಂಗಿಕತೆಯ ಬಗ್ಗೆ ಆಸಕ್ತಿ ಮೂಡಲು ಈ ಸಲಹೆ ಅನುಸರಿಸಿ

ಲೈಂಗಿಕತೆಯ ಬಗ್ಗೆ ಮಹಿಳೆಯರಿಗಿಂತ ಪುರುಷರಲ್ಲಿ ಆಸಕ್ತಿ ಹೆಚ್ಚಾಗಿರುತ್ತದೆ. ಹೆಚ್ಚಿನ ಮಹಿಳೆಯರಿಗೆ ಈ ಬಗ್ಗೆ ಆಸಕ್ತಿ ಇರುವುದಿಲ್ಲ. ಇದಕ್ಕೆ ಹಲವು ಕಾರಣಗಳಿವೆ. ಒತ್ತಡ, ಚಿಂತೆ, ಹಾರ್ಮೋನ್ ನಲ್ಲಿ ವ್ಯತ್ಯಾಸ ಮುಂತಾದ ಸಮಸ್ಯೆಗಳಿಂದ ಮಹಿಳೆಯರು ಆಸಕ್ತಿ ಕಳೆದುಕೊಳ್ಳುತ್ತಾರೆ. ಹಾಗಾಗಿ ಮಹಿಳೆಯರಲ್ಲಿ ಲೈಂಗಿಕ ಆಸಕ್ತಿ ಹೆಚ್ಚಿಸಲು ಈ ಸಲಹೆ ಪಾಲಿಸಿ.

ಮಹಿಳೆಯರು ಪುರುಷರಂತೆ ಪ್ರತಿದಿನ ವ್ಯಾಯಾಮ ಮಾಡಿ. ಇದು ನಿಮ್ಮ ದೇಹವನ್ನು ಸುಧಾರಿಸುತ್ತದೆ. ಮತ್ತು ಇದು ಲೈಂಗಿಕತೆಗೆ ಬೇಕಾದ ಹಾರ್ಮೋನ್ ಮಟ್ಟವನ್ನು ಹೆಚ್ಚಿಸುತ್ತದೆ.

ಮಹಿಳೆಯರು ಸಾಕಷ್ಟು ಒತ್ತಡದಲ್ಲಿದ್ದರೆ ನೀವು ಒತ್ತಡ ನಿರ್ವಹಣೆ ಮಾಡುವುದನ್ನು ಕಲಿಯಿರಿ. ಇದರಿಂದ ನಿಮ್ಮ ಲೈಂಗಿಕ ಜೀವನವನ್ನು ಸುಧಾರಿಸಬಹುದು.

ಕೆಲವೊಮ್ಮೆ ಸಂಬಂಧದಲ್ಲಿ ಸಮಸ್ಯೆಯಾದಾಗ ಲೈಂಗಿಕತೆಯ ಬಗ್ಗೆ ಆಸಕ್ತಿ ಕಡಿಮೆಯಾಗುತ್ತದೆ. ಹಾಗಾಗಿ ಈ ಬಗ್ಗೆ ಸಂಗಾತಿಯ ಜೊತೆಗೆ ಮುಕ್ತವಾಗಿ ಮಾತನಾಡಿ. ಯಾವುದೇ ಸಮಸ್ಯೆಗಳಿದ್ದರೆ ಅದನ್ನು ಚರ್ಚಿಸಿ ಸರಿಪಡಿಸಿಕೊಳ್ಳಿ.

ಹಾಗೇ ಧೂಮಪಾನ ಮತ್ತು ಮದ್ಯಪಾನ ನಿಮ್ಮ ಲೈಂಗಿಕ ಆಸಕ್ತಿಯನ್ನು ಕಡಿಮೆ ಮಾಡುತ್ತದೆ. ಹಾಗಾಗಿ ಮಹಿಳೆಯರು ಹೆಚ್ಚು ಧೂಮಪಾನ ಮತ್ತು ಮದ್ಯಪಾನ ಮಾಡುವುದನ್ನು ತಪ್ಪಿಸಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...