Kannada Duniya

ಬೇಸಿಗೆಯಲ್ಲಿ ಬಿಸಿ ನೀರು ಕುಡಿದರೆ ಏನಾಗುತ್ತದೆ ಗೊತ್ತಾ?

ಸಾಮಾನ್ಯವಾಗಿ ಚಳಿಗಾಲದಲ್ಲಿ ಬಿಸಿ ನೀರು ಕುಡಿಯುವಂತೆ ಹಿರಿಯರು, ವೈದ್ಯರು ಸಲಹೆ ನೀಡುತ್ತಾರೆ. ಯಾಕೆಂದರೆ ಇದು ಆರೋಗ್ಯಕ್ಕೆ ಒಳ್ಳೆಯದು ಮತ್ತು ನಮ್ಮನ್ನು ಸೋಂಕುಗಳಿಂದ ಕಾಪಾಡುತ್ತದೆ. ಆದರೆ ಬೇಸಿಗೆ ಕಾಲದಲ್ಲಿಯೂ ಬಿಸಿ ನೀರು ಕುಡಿದರೆ ಏನಾಗುತ್ತದೆ ಎಂಬುದನ್ನು ತಿಳಿಯಿರಿ.

ಬೇಸಿಗೆಯಲ್ಲಿ ಬಿಸಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಇದು ಬೇಸಿಗೆಯಲ್ಲಿ ದೇಹದ ನೋವಿದ್ದರೆ ಅದನ್ನು ನಿವಾರಿಸುತ್ತದೆ. ಸ್ನಾಯುಗಳ ಬಿಗಿತವನ್ನು ಕಡಿಮೆ ಮಾಡುತ್ತದೆ.

ಹಾಗೇ ಬೇಸಿಗೆಯಲ್ಲಿ ಬಿಸಿ ನೀರು ಕುಡಿಯುವುದರಿಂದ ದೇಹದಿಂದ ಬೆವರು ಬರುತ್ತದೆ. ಇದು ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ.

ಬಿಸಿ ನೀರು ಕುಡಿಯುವುದರಿಂದ ದೇಹದಲ್ಲಿರುವ ಕಲ್ಮಶಗಳು ಹೊರೆಗ ಹೋಗುತ್ತವೆಯಂತೆ. ಇದರಿಂದ ಚರ್ಮದ ಸಮಸ್ಯೆ ಕಾಡುವುದಿಲ್ಲ. ಮೊಡವೆಗಳು ನಿವಾರಣೆಯಾಗುತ್ತದೆ ಮತ್ತು ತ್ವಚೆಯ ಕಾಂತಿ ಹೆಚ್ಚಾಗುತ್ತದೆಯಂತೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...