Kannada Duniya

ಪಿತ್ತಜನಕಾಂಗವನ್ನು ಆರೋಗ್ಯವಾಗಿಡಲು ಈ ವಸ್ತುಗಳನ್ನು ಪ್ರತಿದಿನ ಸೇವಿಸಿ….!

ಪಿತ್ತಜನಕಾಂಗ ಮಾನವ ದೇಹದ ಅತಿದೊಡ್ಡ ಗ್ರಂಥಿಯಾಗಿದೆ. ಪಿತ್ತಜನಕಾಂಗವು ಆಹಾರದಿಂದ ಪೋಷಕಾಂಶಗಳನ್ನು ಜೀರ್ಣಿಸಿಕೊಳ್ಳಲು ಮತ್ತು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಟ್ಟ ಆಹಾರ ಪದ್ಧತಿಯಿಂದ ಹೆಚ್ಚಿನವರು ಪಿತ್ತಜನಕಾಂಗದ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಹಾಗಾಗಿ ಪಿತ್ತಜನಕಾಂಗವನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಆಹಾರ ಸೇವಿಸಿ.

-ಪ್ರತಿದಿನ ಗ್ರೀನ್ ಟೀ ಕುಡಿಯಿರಿ. ಇದರಲ್ಲಿ ಜೀವಸತ್ವಗಳು, ಖನಿಜಗಳು, ಫೈಬರ್, ಕೆಫೀನ್, ಆ್ಯಂಟಿ ಆಕ್ಸಿಡೆಂಟ್ ಗಳು ಮತ್ತು ಅಮೈನೊ ಆಮ್ಲಗಳನ್ನು ಹೊಂದಿರುತ್ತದೆ. ಇದು ದೇಹದಲ್ಲಿರುವ ವಿಷವನ್ನು ಹೊರಹಾಕುತ್ತದೆ. ಗ್ರೀನ್ ಟೀ ಲಿವರ್ ಗೆ ತುಂಬಾ ಪ್ರಯೋಜನಕಾರಿ ಎಂದು ಸಂಶೋಧನೆಯಿಂದ ತಿಳಿದುಬಂದಿದೆ.

-ಅರಿಶಿನವನ್ನು ಹಲವು ಅಡುಗೆಗಳಲ್ಲಿ ಬಳಸುತ್ತಾರೆ. ಇದು ದೇಹದಲ್ಲಿರುವ ವಿಷವನ್ನು ಹೊರಹಾಕುತ್ತದೆ. ಅದಕ್ಕಾಗಿ ನೀವು ಅರಿಶಿನ ನೀರನ್ನು ಪ್ರತಿದಿನ ಸೇವಿಸಿ. ಇದು ಬ್ಯಾಕ್ಟೀರಿಯಾಗಳನ್ನು ನಾಶಮಾಡಿ ಲಿವರ್ ಅನ್ನು ಆರೋಗ್ಯವಾಗಿಡುತ್ತದೆ.

ಒಂದು ತಿಂಗಳಿನಲ್ಲಿ 3 ರಿಂದ 5 ಕೆಜಿ ತೂಕ ಇಳಿಸಿಕೊಳ್ಳಲು ಈ ಪಾನೀಯ ಸೇವಿಸಿ

-ಬೀಟ್ ರೋಟ್ ನಲ್ಲಿ ಕಬ್ಬಿಣ, ಬೀಟಾ ಕ್ಯಾರೋಟಿನ್ ಮತ್ತು ಪೊಟ್ಯಾಸಿಯಂ ಸಮೃದ್ಧವಾಗಿದೆ. ಇದರ ಸೇವನೆಯು ರಕ್ತವನ್ನು ಶುದ್ಧೀಕರಿಸುತ್ತದೆ. ಇದು ಚರ್ಮದಲ್ಲಿನ ಎಲ್ಲಾ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ಆದ್ದರಿಂದ ಖಾಲಿ ಹೊಟ್ಟೆಯಲ್ಲಿ ಪ್ರತಿದಿನ ಬೆಳಿಗ್ಗೆ ಬೀಟ್ ರೋಟ್ ಜ್ಯೂಸ್ ಕುಡಿಯಿರಿ. ಇದು ಲಿವರ್ ಅನ್ನು ಸಕ್ರಿಯಗೊಳಿಸುತ್ತದೆ


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...