Kannada Duniya

ಸೋರೆಕಾಯಿ ರಸವನ್ನು ಕುಡಿಯುವುದರಿಂದ ಏನಾಗುತ್ತದೆ ಗೊತ್ತಾ…?

ತರಕಾರಿಗಳಲ್ಲಿ ಹೆಚ್ಚಿನ ಪೋಷಕಾಂಶಗಳಿರುತ್ತದೆ. ಇದು ಆರೋಗ್ಯಕ್ಕೂ ಉತ್ತಮ. ಅದರಲ್ಲೂ ಸೋರೆಕಾಯಿಯಲ್ಲಿ ವಿಟಮಿನ್ ಬಿ, ಸಿ, ಕೆ, ಇ, ಎ, ಕಬ್ಬಿಣ, ಮೆಗ್ನಿಶಿಯಂ, ಪೊಟ್ಯಾಶಿಯಂ ಮುಂತಾದ ಪೋಷಕಾಂಶಗಳಿವೆ. ಹಾಗಾಗಿ ಸೋರೆಕಾಯಿಯನ್ನು ಬೇಸಿಗೆಯಲ್ಲಿ ಸೇವಿಸಿದರೆ ಏನೆಲ್ಲಾ ಪ್ರಯೋಜನವಿದೆ ಎಂಬುದನ್ನು ತಿಳಿದುಕೊಳ್ಳಿ.

ಸೋರೆಕಾಯಿಯಲ್ಲಿ ಕೋಲಿನ್ ಅಂಶ ಅಧಿಕವಾಗಿದೆ. ಇದು ಮೆದುಳಿನ ನರಕೋಶಗಳು ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುತ್ತದೆ. ಹಾಗಾಗಿ ಇದರಿಂದ ಮಾನಸಿಕ ಕಾಯಿಲೆಗಳು ದೂರವಾಗುತ್ತದೆ.

ಸೋರೆಕಾಯಿ ರಸವನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಕೊಲೆಸ್ಟ್ರಾಲ್ ಮಟ್ಟ ಕಡಿಮೆಯಾಗುತ್ತದೆ. ಇದರಲ್ಲಿ ಅಧಿಕ ಫೈಬರ್ ಅಂಶವಿದ್ದು, ಇದು ರಕ್ತದೊತ್ತಡವನ್ನು ಸಮತೋಲನದಲ್ಲಿಡಲು ಸಹಾಯ ಮಾಡುತ್ತದೆ.

Brain Stroke risk: ಸ್ನಾನ ಮಾಡುವಾಗ ಈ ತಪ್ಪನ್ನು ಮಾಡಿದರೆ ನೀವು ಬ್ರೈನ್ ಸ್ಟ್ರೋಕ್ ಗೆ ಬಲಿಯಾಗಬಹುದು..ಎಚ್ಚರ…!

ಸೋರೆಕಾಯಿ ಚರ್ಮವನ್ನು ನಿರ್ವಿಷಗೊಳಿಸುತ್ತದೆ. ಮತ್ತು ಮೇದೋಗ್ರಂಥಿಗಳ ಸ್ರಾವವನ್ನು ನಿಯಂತ್ರಿಸುತ್ತದೆ. ಇದರಿಂದ ಮೊಡವೆಗಳ ಸಮಸ್ಯೆ ದೂರವಾಗುತ್ತದೆ.

ಹಾಗೇ ಸೋರೆಕಾಯಿ ನಿದ್ರಾಹೀನತೆ ಸಮಸ್ಯೆಯನ್ನು ದೂರಮಾಡುತ್ತದೆ. ಇದರ ರಸವನ್ನು ಪ್ರತಿದಿನ ಕುಡಿದರೆ ನಿದ್ರೆ ಚೆನ್ನಾಗಿ ಬರುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...