Kannada Duniya

ಮಧುಮೇಹಿಗಳು ಪ್ರತಿದಿನ ಈ ಹಾಲನ್ನು ಕುಡಿಯಿರಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಒಮ್ಮೆ ಬಂದರೆ ಮತ್ತೆ ವಾಸಿಯಾಗುವುದಿಲ್ಲ. ಹಾಗಾಗಿ ಇವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು, ಮತ್ತು ಸರಿಯಾದ ಆಹಾರ ಕ್ರಮವನ್ನು ಪಾಲಿಸಬೇಕು. ಹಾಗಾಗಿ ಮಧುಮೇಹಿಗಳು ಪ್ರತಿದಿನ ಈ ಹಾಲನ್ನು ಕುಡಿಯಿರಿ.

ಅರಿಶಿನ ಹಾಲು : ಇದು ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಉರಿಯೂತ ಮತ್ತು ಆ್ಯಂಟಿ ಆಕ್ಸಿಡೆಂಟ್ ಗಳು ಸಮೃದ್ಧವಾಗಿದೆ. ಹಾಗಾಗಿ ಇದು ದೇಹದಲ್ಲಿ ಇನ್ಸುಲಿನ್ ಮಟ್ಟವನ್ನು ಸಮತೋಲನದಲ್ಲಿಡುತ್ತದೆ.

ದಾಲ್ಚಿನ್ನಿ ಹಾಲು : ಇದು ಮಧುಮೇಹಿಗಳಿಗೆ ತುಂಬಾ ಒಳ್ಳೆಯದು. ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಗಳು ಸಮೃದ್ಧವಾಗಿದೆ. ಇದು ಸಕ್ಕರೆಯಂಶವನ್ನು ನಿಯಂತ್ರಿಸುತ್ತದೆ.

ಬಾದಾಮಿ ಹಾಲು : ಇದು ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ. ಇದರಲ್ಲಿ ವಿಟಮಿನ್ ಡಿ ಮತ್ತು ಅಗತ್ಯ ಪೋಷಕಾಂಶಗಳು, ಫೈಬರ್, ಪ್ರೋಟೀನ್ ಸಮೃದ್ಧವಾಗಿದೆ. ಇದು ಮಧುಮೇಹಿಗಳಿಗೆ ತುಂಬಾ ಒಳ್ಳೆಯದು.

 


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...