Kannada Duniya

ನಿದ್ರಾಹೀನತೆ ಸಮಸ್ಯೆ ಇರುವವರು ರಾತ್ರಿ ಮಲಗುವ ಮುನ್ನ ಈ ಯೋಗಾಸನ ಅಭ್ಯಾಸ ಮಾಡಿ

ಇಂದಿನ ದಿನಗಳಲ್ಲಿ ಕೆಲಸದ ಒತ್ತಡ, ಜೀವನದಲ್ಲಿ ಎದುರಾಗುವಂತಹ ಸಮಸ್ಯೆಗಳಿಂದ ಜನರು ನಿದ್ರಾಹೀನತೆ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಇದರಿಂದ ಹಲವು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು ರಾತ್ರಿ ಮಲಗುವ ಮುನ್ನ ಈ ಯೋಗಾಸನ ಅಭ್ಯಾಸ ಮಾಡಿ.

ಬಾಲಾಸನ: ನೆಲದ ಮೇಲೆ ಮಂಡಿಯೂರಿ ಕುಳಿತುಕೊಳ್ಳಿ. ನಿಮ್ಮ ಮೊಣಕಾಲನ್ನು ಸೊಂಟಕ್ಕಿಂತ ಅಂಗಲವಾಗಿಸಿ ಮುಂದಕ್ಕೆ ಬಾಗಿ ನಿಮ್ಮ ತಲೆಯನ್ನು ನೆಲದ ಮೇಲೆ ಇರಿಸಿ. ಈ ಸ್ಥಾನದಲ್ಲಿ ಕೆಲವು ಸೆಕೆಂಡುಗಳ ಕಾಲ ಹಿಡಿದುಕೊಳ್ಳಿ.

ಶವಾಸನ: ನಿಮ್ಮ ಬೆನ್ನಿನ ಮೇಲೆ ಮಲಗಿ ನಿಮ್ಮ ಪಾದಗಳನ್ನು ಸೊಂಟದ ಅಗಲಕ್ಕೆ ತಂದು ಕೈಗಳನ್ನು ನಿಮ್ಮ ದೇಹದಿಂದ ಸ್ವಲ್ಪ ದೂರವಿಟ್ಟು ಕಣ್ಣು ಮುಚ್ಚಿ ವಿಶ್ರಾಂತಿ ಪಡೆಯಿರಿ.

ಉತ್ತಾನಾಸನ : ನೆಲದ ಮೇಲೆ ನಿಂತುಕೊಂಡು ನಿಮ್ಮ ಎರಡು ಕೈಗಳನ್ನು ಮೇಲಕ್ಕೆತ್ತಿ. ನಿಮ್ಮ ಕೈಗಳನ್ನು ಹಿಂದಕ್ಕೆ ಬಾಗಿಸಿ. ನಿಮ್ಮ ಕಣ್ಣುಗಳನ್ನು ತೆರೆದಿಡಿ. ನಿಮ್ಮ ತಲೆಯನ್ನು ನಿಮ್ಮ ತೋಳುಗಳ ನಡುವೆ ಇರಿಸಿ, ಮೊಣಕಾಲನ್ನು ಬಾಗಿಸಬೇಡಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...