Kannada Duniya

ವಿಟಮಿನ್ ಡಿ ಕೊರತೆಯು ಮಧುಮೇಹಕ್ಕೆ ಕಾರಣವಾಗಬಹುದೇ….?

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾದಾಗ ಮಧುಮೇಹ ಸಮಸ್ಯೆ ಕಾಡುತ್ತದೆ. ಇದಕ್ಕೆ ಹಲವು ಕಾರಣಗಳಿರಬಹುದು ಆದರೆ ವಿಟಮಿನ್ ಡಿ ಕೊರತೆಯಿಂದ ಮಧುಮೇಹ ಸಮಸ್ಯೆ ಕಾಡುತ್ತದೆ ಎಂಬುದು ಸಂಶೋಧನೆಯಿಂದ ತಿಳಿದುಬಂದಿದೆ.

ಸಂಶೋಧನೆಯ ಪ್ರಕಾರ ಸಮತೋಲಿತ ಆಹಾರದ ಜೊತೆಗೆ ಜನರು ಹೊರಾಂಗಣ ಚಟುವಟಿಕೆಗಳಿಗೆ ಸ್ವಲ್ಪ ಸಮಯವನ್ನು ನೀಡುವ ಮೂಲಕ ಮಧುಮೇಹ ಅಪಾಯವನ್ನು ಕಡಿಮೆ ಮಾಡಬಹುದಂತೆ. ವಿಟಮಿನ್ ಡಿ ದೇಹವು ಕ್ಯಾಲ್ಸಿಯಂ ಅನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ.

ಈ ಅಭ್ಯಾಸಗಳು ಹಠಾತ್ ಹೃದಯಾಘಾತವನ್ನು ಹೆಚ್ಚಿಸುತ್ತದೆ

ಹಾಗೇ ವಿಟಮಿನ್ ಡಿಗೆ ಗ್ಲೂಕೋಸ್ ಚಯಾಪಚಯಗಳೊಂದಿಗೆ ನಿಕಟವಾದ ಸಂಬಂಧವಿದೆ. ವಿಟಮಿನ್ ಡಿ ಕೊರತೆಯಿರುವವರು ತೂಕ ಹೆಚ್ಚಳ ಸಮಸ್ಯೆಯಿಂದ ಬಳಲುತ್ತಾರೆ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುತ್ತದೆ. ಹಾಗಾಗಿ ಮಧುಮೇಹ ಸಮಸ್ಯೆ ಕಾಡುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...