Kannada Duniya

ತೂಕದ ಜೊತೆಗೆ ಕಾಯಿಲೆಗಳನ್ನು ನಿವಾರಿಸಲು ಇವುಗಳನ್ನು ಸೇವಿಸಿ…..!

ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಹಲವು ಸಮಸ್ಯೆಗಳು ಕಾಡುತ್ತಿದೆ. ಜನರು ತೂಕ, ಮಧುಮೇಹ, ಹೃದ್ರೋಗ, ರಕ್ತದೊತ್ತಡ, ಕ್ಯಾನ್ಸರ್, ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹಾಗಾಗಿ ಜನರು ತಮ್ಮ ತೂಕವನ್ನು ನಿಯಂತ್ರಿಸುವುದರ ಜೊತೆಗೆ ಕಾಯಿಲೆಗಳನ್ನು ನಿವಾರಿಸಲು ಈ ಸಲಹೆ ಪಾಲಿಸಿ.

ಹಸಿರು ತರಕಾರಿ ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಜೀವಸತ್ವಗಳು, ಖನಿಜಗಳು ಮತ್ತು ಪ್ರೋಟೀನ್ ಗಳು ಸಮೃದ್ಧವಾಗಿರುತ್ತದೆ. ಇದು ದೇಹದ ರೋಗ ನಿರೋಧಕ ಶಕ್ತಿಗಳನ್ನು ಹೆಚ್ಚಿಸುತ್ತದೆ. ಇದರಿಂದ ಬೊಜ್ಜು, ಕ್ಯಾನ್ಸರ್, ರಕ್ತಹೀನತೆ, ಮಧುಮೇಹ, ಹೃದ್ರೋಗ, ರಕ್ತದೊತ್ತಡ ಸಮಸ್ಯೆ ಕಾಡುವುದಿಲ್ಲ.

ಸೋಮವಾರ ದೇವರ ಆಶೀರ್ವಾದ ಪಡೆಯಲು ಈ ಕೆಲಸ ಮಾಡಿ….!

ಅಲ್ಲದೇ ಹಸಿರು ತರಕಾರಿಗಳಲ್ಲಿ ಕ್ಯಾಲ್ಸಿಯಂ ಹೇರಳವಾಗಿರುತ್ತದೆ. ಇದು ಹಲ್ಲುಗಳು ಮತ್ತು ಮೂಳೆಗಳನ್ನು ಬಲಪಡಿಸುತ್ತದೆ. ಹಾಗಾಗಿ ಹಸಿರು ಸೊಪ್ಪುಗಳನ್ನು ಹೆಚ್ಚು ಸೇವಿಸಿ. ಅಲ್ಲದೇ ಹಸಿರು ತರಕಾರಿಗಳು ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ತೂಕ ವೇಗವಾಗಿ ಇಳಿಕೆಯಾಗುತ್ತದೆ.

 


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...