Kannada Duniya

ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗಲು ಒಳಉಡುಪುಗಳು ಕಾರಣವೇ?

ಪುರುಷರು ತಂದೆಯಾಗಲು ವೀರ್ಯಾಣುಗಳ ಸಂಖ್ಯೆ ಪ್ರಮುಖ ಪಾತ್ರವಹಿಸುತ್ತದೆ. ಯಾವ ಪುರುಷರಲ್ಲಿ ವೀರ್ಯಾಣು ಸಂಖ್ಯೆ ಕಡಿಮೆ ಇರುತ್ತದೆಯೋ ಅವರು ಬಂಜೆತನದ ಸಮಸ್ಯೆಗೆ ಒಳಗಾಗುತ್ತಾರೆ. ಹಾಗಾಗಿ ನಿಮ್ಮ ವೀರ್ಯಾಣುಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬೇಕು. ಆದರೆ ಒಳ ಉಡುಪುಗಳು ವೀರ್ಯಾಣು ಸಂಖ್ಯೆ ಕ್ಷೀಣಿಸಲು ಕಾರಣವಾಗಿದೆಯೇ? ಎಂಬುದನ್ನು ತಿಳಿಯಿರಿ.

ಹೌದು. ನೀವು ಬಿಗಿಯಾದ ಒಳ ಉಡುಪುಗಳನ್ನು ಧರಿಸುವುದರಿಂದ ಮತ್ತು ಬಿಗಿಯಾದ ಪ್ಯಾಂಟ್, ಜೀನ್ಸ್ ಧರಿಸುವುದು ಪುರುಷರ ಲೈಂಗಿಕ ಆರೋಗ್ಯಕ್ಕೆ ಒಳ್ಳೆಯದಲ್ಲ. ಇದು ಲೈಂಗಿಕ ಸಮಸ್ಯೆಗೆ ಕಾರಣವಾಗುತ್ತದೆ. ಇದರಿಂದ ನಿಮ್ಮ ಜನನಾಂಗಗಳಲ್ಲಿ ಉಷ್ಣತೆ ಹೆಚ್ಚಾಗುತ್ತದೆ. ಇದು ವೀರ್ಯಾಣುಗಳ ಸಂಖ್ಯೆ ಕ್ಷೀಣಿಸಲು ಕಾರಣವಾಗುತ್ತದೆ.

ಹಾಗಾಗಿ ಸಡಿಲವಾದ ಬಟ್ಟೆಗಳನ್ನು ಧರಿಸಿ. ವೃಷಣಗಳನ್ನು ತಂಪಾಗಿರಿಸುವಂತಹ ಉಡುಪುಗಳನ್ನು ಧರಿಸಿ. ಬಿಸಿ ನೀರಿನಿಂದ ಸ್ನಾನ ಮಾಡುವುದನ್ನು ತಪ್ಪಿಸಿ.

ದೇಹಕ್ಕೆ ಅಗತ್ಯವಾದಷ್ಟು ವಿಶ್ರಾಂತಿ ಸಿಗುವಂತೆ ನೋಡಿಕೊಳ್ಳಿ. ಇದು ಕೂಡ ವೀರ್ಯಾಣುಗಳ ಆರೋಗ್ಯಕ್ಕೆ ಒಳ್ಳೆಯದು.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...