Kannada Duniya

ಮಕ್ಕಳ ಮಾನಸಿಕ ಆರೋಗ್ಯ ಉತ್ತಮವಾಗಿರಲು ಈ ಆಹಾರ ನೀಡಿ

ಮಕ್ಕಳು ದೈಹಿಕವಾಗಿ ಬೆಳವಣಿಗೆ ಹೊಂದಿದರೆ ಸಾಕಾಗಲ್ಲ, ಅವರು ಮಾನಸಿಕವಾಗಿ ಕೂಡ ಬೆಳವಣಿಗೆ ಹೊಂದುವುದು ಅವಶ್ಯಕ. ಇದರಿಂದ ಅವರ ಮಾನಸಿಕ ಆರೋಗ್ಯ ಸದೃಢವಾಗಿರುತ್ತದೆ. ಹಾಗಾಗಿ ನೀವು ನಿಮ್ಮ ಮಕ್ಕಳಿಗೆ ಈ ಆಹಾರ ನೀಡಿ.

ಮೊಟ್ಟೆಗಳು : ಇದು ಮಕ್ಕಳ ಮಾನಸಿಕ ಬೆಳವಣಿಗೆಗೆ ಪ್ರಯೋಜನಕಾರಿಯಾಗಿದೆ. ಇದರಲ್ಲಿ ಪ್ರೋಟೀನ್ ಮತ್ತು ಕೋಲೀನ್ ಹೆಚ್ಚಾಗಿದೆ. ಇದು ಮೆದುಳಿನ ಬೆಳವಣಿಗೆಗೆ ಸಹಕರಿಸುತ್ತದೆ.

ಬೇಳೆ ಕಾಳುಗಳು : ಇದರಲ್ಲಿ ಹಲವಾರು ಪೋಷಕಾಂಶಗಳು ಸಮೃದ್ಧವಾಗಿದೆ. ಇದನ್ನು ಮಕ್ಕಳಿಗೆ ನೀಡುವುದರಿಂದ ಮೂಳೆಗಳು ಬಲಗೊಳ್ಳುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಗೂ ಉತ್ತಮ.

ಗೆಣಸು : ಇದರಲ್ಲಿ ಬೀಟಾ ಕ್ಯಾರೋಟಿನ್ ಸಮೃದ್ಧವಾಗಿದೆ. ಇದು ಮಕ್ಕಳ ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುತ್ತದೆ. ಇದು ಮೆದುಳಿನ ಬೆಳವಣಿಗಗೆ ಬೇಕಾದ ಪೋಷಕಾಂಶಗಳನ್ನು ಒದಗಿಸುತ್ತದೆ.

ಹಸಿರು ತರಕಾರಿ : ಇದರಲ್ಲಿ ಕಬ್ಬಿಣ ಮತ್ತು ಪೋಲೇಟ್ ಹೇರಳವಾಗಿದೆ. ಇದು ಮಕ್ಕಳ ಮೆದುಳಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ.

ಮೊಸರು : ಇದು ಕರುಳಿನ ಆರೋಗ್ಯಕ್ಕೆ ಒಳ್ಳೆಯದು. ಇದು ಮಾನಸಿಕ ಆರೋಗ್ಯದ ಮೇಲೆ ಸಕರಾತ್ಮಕ ಪರಿಣಾಮ ಬೀರುತ್ತದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...