Kannada Duniya

ಊಟ ಮಾಡಿದ ತಕ್ಷಣ ಈ ಯೋಗ ಮಾಡಿದರೆ ಕೊಬ್ಬು ಸಂಗ್ರಹವಾಗುವುದಿಲ್ಲವಂತೆ

ಯೋಗವನ್ನು ಅಭ್ಯಾಸ ಮಾಡುವುದರಿಂದ ಅದು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ತುಂಬಾ ಒಳ್ಳೆಯದಂತೆ. ಹಾಗಾಗಿ ಹೆಚ್ಚಿನ ಜನರು ಬೆಳಿಗ್ಗೆ ಮತ್ತು ಸಂಜೆಯ ವೇಳೆ ಯೋಗಾಭ್ಯಾಸ ಮಾಡುತ್ತಾರೆ. ಆದರೆ ನೀವು ಊಟವಾದ ತಕ್ಷಣ ಈ ಯೋಗ ಮಾಡಬಹುದಂತೆ.

ಊಟವಾದ ತಕ್ಷಣ ವಜ್ರಾಸನವನ್ನು ಅಭ್ಯಾಸ ಮಾಡಬೇಕಂತೆ. ಇದನ್ನು ಮಾಡಲು ನೇರವಾಗಿ ಕುಳಿತುಕೊಂಡು ಕಾಲುಗಳನ್ನು ಮುಂದಕ್ಕೆ ಚಾಚಿ ಬೆನ್ನನ್ನು ನೇರವಾಗಿಟ್ಟುಕೊಳ್ಳಿ. ನಂತರ ಕಾಲುಗಳನ್ನು ಒಂದರ ನಂತರ ಇನ್ನೊಂದನ್ನು ಹಿಂದಕ್ಕೆ ಚಾಚಿ ಪಾದಗಳ ಮೇಲೆ ಕುಳಿತುಕೊಳ್ಳಿ. ನಿಮ್ಮ ಕೈಗಳನ್ನು ತೊಡೆಯ ಮೇಲಿಟ್ಟು ಕಣ್ಣುಗಳನ್ನು ಮುಚ್ಚಿ ನಿಧಾನವಾಗಿ ಉಸಿರನ್ನು ಎಳೆದುಕೊಳ್ಳಿ.

ವಜ್ರಾಸನವನ್ನು ನಿಯಮಿತವಾಗಿ ಮಾಡುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಅಲ್ಸರ್, ಆ್ಯಸಿಡಿಟಿ ಸಮಸ್ಯೆಗಳನ್ನು ಹೋಗಲಾಡಿಸಬಹುದು. ಇದು ಬೆನ್ನು ಮೂಳೆಗಳನ್ನು ಬಲಪಡಿಸುತ್ತದೆ. ಇದು ಬೆನ್ನು ನೋವನ್ನು ನಿವಾರಿಸುತ್ತದೆ. ಇದು ಹೊಟ್ಟೆಯ ಕೊಬ್ಬುಗಳನ್ನು ಕರಗಿಸಲು ಸಹಾಯ ಮಾಡುತ್ತದೆ. ಹಾಗಾಗಿ ರಾತ್ರಿ ಊಟವಾದ ತಕ್ಷಣ ಈ ಭಂಗಿಯಲ್ಲಿ ಕುಳಿತುಕೊಳ್ಳಿ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...