Kannada Duniya

ಫೆಬ್ರವರಿ 7ರಿಂದ ಬುಧ ಗ್ರಹದಿಂದ ಈ ರಾಶಿಯವರಿಗೆ ಸಮಸ್ಯೆಯಾಗಲಿದೆಯಂತೆ

ಜ್ಯೋತಿಷ್ಯಶಾಸ್ತ್ರದ ಪ್ರಕಾರ ಫೆಬ್ರವರಿ ತಿಂಗಳಿನಲ್ಲಿ ಬುಧನು ಮಕರ ರಾಶಿಯಲ್ಲಿರುತ್ತಾನೆ. ಫೆಬ್ರವರಿ 7 ರಿಂದ ಬುಧನು ಮಕರ ರಾಶಿಯಲ್ಲಿ ಅಸ್ತಮಿಸಲಿದ್ದಾನೆ. ಇದರಿಂದ ಕೆಲವು ರಾಶಿಯವರಿಗೆ ಬುಧನು ಕೆಟ್ಟ ಪರಿಣಾಮವನ್ನುಂಟು ಮಾಡಲಿದ್ದಾನೆ. ಆ ರಾಶಿಗಳು ಯಾವುದೆಂಬುದನ್ನು ತಿಳಿದುಕೊಳ್ಳಿ.

ಮೇಷ ರಾಶಿ : ನಿಮ್ಮ ಪ್ರತಿ ಕೆಲಸದಲ್ಲಿ ಅಡೆತಡೆಗಳು ಎದುರಾಗಲಿದೆ. ಕೆಲಸದ ಸ್ಥಳದಲ್ಲಿ ಸ್ವಲ್ಪ ಕಿರಿಕಿರಿಯನ್ನು ಅನುಭವಿಸುತ್ತೀರಿ. ಈ ಸಮಯದಲ್ಲಿ ನೀವು ಸ್ವಲ್ಪ ಯೋಚಿಸಿದ ನಂತರವೇ ಕೆಲಸಕ್ಕೆ ಕೈಹಾಕಿ. ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಹಣಕಾಸಿನ ನಷ್ಟ ಅನುಭವಿಸಬೇಕಾಗಬಹುದು.

ಮಿಥುನ ರಾಶಿ : ನೀವು ಆರ್ಥಿಕ, ಕೌಟುಂಬಿಕ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಅನುಭವಿಸಬಹುದು. ನಿಮಗೆ ವ್ಯವಹಾರದಲ್ಲಿ ನಷ್ಟವಾಗುವ ಸಂಭವವಿದೆ. ಕೆಲಸದಲ್ಲಿ ಹೆಚ್ಚಿನ ಒತ್ತಡವನ್ನು ಅನುಭವಿಸುತ್ತೀರಿ.

ಸಿಂಹ ರಾಶಿ : ನೀವು ಆರ್ಥಿಕ ನಷ್ಟವನ್ನು ಎದುರಿಸಬೇಕಾಗುತ್ತದೆ. ನೀವು ಕೆಲಸದ ಸ್ಥಳದಲ್ಲಿ ಸ್ವಲ್ಪ ಎಚ್ಚರಿಕೆಯಿಂದಿರಿ. ಯಾಕೆಂದರೆ ನಿಮ್ಮ ಕೆಲಸದಿಂದ ಬೇರೆಯವರು ಪ್ರಶಂಸೆಯನ್ನು ಪಡೆಯಬಹುದು. ಕುಟುಂಬದವರ ಜೊತೆ ಮಾತನಾಡುವಾಗ ಎಚ್ಚರಿಕೆಯಿಂದಿರಿ. ನಿಮ್ಮ ಮಾತಿನಿಂದ ಜಗಳವಾಗುವ ಸಂಭವವಿದೆ.


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...